ದಕ್ಷಿಣ ಕನ್ನಡ

ಒಂದೇ ಕುಟುಂಬದ ನಾಲ್ಕು ಮಂದಿ ಸಾವು

Published On :

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಜೀಪ್ ಡಿಕ್ಕಿಯಾಗಿ ಪುರಸಭಾ ಸದಸ್ಯೆ ಲೀನಾ ಮಸ್ಕರೇನಸ್ ಸಹಿತ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ- ಮೈಸೂರು ರಾಜ್ಯ ಹೆದ್ದಾರಿಯ ಆರ್ಯಾಪು ಗ್ರಾಮದ ಸಂಟ್ಯಾರು ಸೇತುವೆ ಬಳಿ ಭಾನುವಾರ ಸಂಜೆ ನಡೆದಿದೆ. ಪುತ್ತೂರಿನ ಬೈಪಾಸ್ ತೆಂಕಿಲ ನಿವಾಸಿಗಳಾದ ಪುತ್ತೂರು ಪುರಸಭಾ ಸದಸ್ಯೆ ಲೀನಾ ಮಸ್ಕರೇನಸ್ (46), ಅವರ ಪತಿ- ಪುತ್ತೂರು ಸಂತ ಫಿಲೋಮಿನಾ ಪ್ರೌಢಶಾಲೆ ಸಿಬ್ಬಂದಿ ಪೀಟರ್ ಮಸ್ಕರೇನಸ್ (50), ಪುತ್ರ ಮಾದೇ ದೇವುಸ್ ಶಾಲೆಯ ವಿದ್ಯಾರ್ಥಿ ಪ್ರಿತೇಶ್ ಮಸ್ಕರೇನಸ್ (13) ಮತ್ತು ಪೀಟರ್ ಅವರ ಸಹೋದರ ಅಂತೋನಿ ಮಸ್ಕರೇನಸ್ (42) ಮೃತರು. ಪೀಟರ್ ಅವರ ಇನ್ನೋರ್ವ ಪುತ್ರ ಪ್ರೀತಂ ಮಸ್ಕರೇನಸ್ (17) ಮತ್ತು ಸಹೋದರ ಜೋಸೆಫ್ ಮಸ್ಕರೇನಸ್ ಎಂಬವರ ಪುತ್ರಿ ಜೋಸ್ಲಿನ್ ಮಸ್ಕರೇನಸ್ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಟರ್ ಮಸ್ಕರೇನಸ್ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.