ದ.ಕ.ದಲ್ಲಿ 67 ಡೆಂಘೀ ಪ್ರಕರಣ: ಶ್ರೀರಂಗಪ್ಪ
ಮಂಗಳೂರು: ಜಿಲ್ಲೆಯಲ್ಲಿ ಜನವರಿಯಿಂದ ಮೇ ತಿಂಗಳವರೆಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು 67 ಡೆಂಘೀ ಪ್ರಕರಣಗಳು ದಾಖಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಓ. ಶ್ರೀರಂಗಪ್ಪ ಹೇಳಿದ್ದಾರೆ. ಸೋಮವಾರ ಆರೋಗ್ಯ ಇಲಾಖೆ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೆಂಘೀಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲದ ಕಾರಣ ಜನರು ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಡೆಂಘೀ ಜ್ವರದ ಪ್ರಾಥಮಿಕ ಹಂತವನ್ನು ಪತ್ತೆ ಹಚ್ಚುವ ಸಲುವಾಗಿ ಸರ್ಕಾರದ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 'ಎನ್ಎಸ್1 ರ್ಯಾಪಿಡ್ ಸಾಧನ'ವನ್ನು ವಿತರಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಹೆಚ್ಚು ಡೆಂಘೀ ಜ್ವರ ಬಂದಿರುವ ಪ್ರದೇಶಗಳ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂದು ಹೇಳಿದರು.
ಮಂಗಳೂರು-8, ಬಂಟ್ವಾಳ- 22, ಬೆಳ್ತಂಗಡಿ- 1, ಸುಳ್ಯ- 17, ಪುತ್ತೂರು- 6, ಪಾಲಿಕೆ ವ್ಯಾಪ್ತಿ- 10 ಪ್ರಕರಣಗಳು ದಾಖಲಾಗಿದೆ.
ಪ್ರತಿ ತಾಲೂಕಿನಲ್ಲಿಯೂ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಒಂದು ವಾರದಲ್ಲಿ ಮನೆ ಮನೆಗೆ ತೆರಳಿ ಡೆಂಘೀ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಈ ಸಂದರ್ಭ ಮನೆ ಸುತ್ತಮುತ್ತ ಸೊಳ್ಳೆ ಉತ್ಪತ್ತಿ ಸ್ಥಳವನ್ನು ಗುರುತಿಸಿ ನಾಶ ಮಾಡಲು ಸೂಚಿಸಲಾಗಿದೆ ಎಂದರು.
ಸರ್ವ ಶಿಕ್ಷಣ ಅಭಿಯಾನದಡಿ ತಂಡವಾಗಿ ಮನೆಗೆ ತೆರಳಿ ಡೆಂಘೀ ಜಾಗೃತಿಯ ಕುರಿತು ಕರಪತ್ರ ಹಂಚಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

