ಲಾರಿ-ಬೈಕ್ ಡಿಕ್ಕಿ: ಸಹೋದರರಿಬ್ಬರಿಗೆ ಗಂಭೀರ ಗಾಯ
ಉಪ್ಪಿನಂಗಡಿ: ಇಲ್ಲಿಗೆ ಸಮೀಪ ಕೊಯ್ಲ ನೀರಾಜೆ ಎಂಬಲ್ಲಿ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಾಗಿದ್ದ ಸಹೋದರರಿಬ್ಬರು ಗಂಭೀರ ಸ್ವರೂಪದ ಗಾಯಗೊಂಡ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ಗಾಯಗೊಂಡಿರುವ ಬೈಕ್ ಸವಾರರನ್ನು ಕೆಮ್ಮಾರ ನಿವಾಸಿ ಗೋಪಾಲ ನೇಕಾರ ಎಂಬವರ ಪುತ್ರರಾದ ಯೋಗೀಶ್ (22) ಮತ್ತು ವಿಘ್ನೇಶ್ (18) ಎಂದು ಗುರುತಿಸಲಾಗಿದೆ.
ಇವರಿಬ್ಬರೂ ಬೈಕ್ನಲ್ಲಿ ಮನೆಯಿಂದ ಆತೂರು ಬಳಿಯ ಗೋಳಿತ್ತಡಿ ಎಂಬಲ್ಲಿಗೆ ಹೋಗುತ್ತಿದ್ದಾಗ ಕಡಬದ ಕಡೆಯಿಂದ ಮಂಗಳೂರು ಕಡೆಗೆ ಚರಿಸುತ್ತಿದ್ದ ಲಾರಿ ಡಿಕ್ಕಿ ಹೊಡೆಯಿತು. ತಲೆಗೆ ಗಂಭೀರ ಸ್ವರೂಪದ ಗಾಯವನ್ನು ಪಡೆದಿರುವ ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯೋಗೀಶ್ ಮಂಗಳೂರು ಎಂಆರ್ಪಿಎಲ್ ಉದ್ಯೋಗಿಯಾಗಿದ್ದು, ಅವರ ತಮ್ಮ ವಿಘ್ನೇಶ್ ರಾಮಕುಂಜ ಕಾಲೇಜಿನಲ್ಲಿ ಪಿಯುಸಿ ಮುಗಿಸಿ ಮುಂದಿನ ವಿದ್ಯಾಭ್ಯಾಸಕ್ಕಾಗಿ ಪದವಿಗೆ ಅದೇ ಕಾಲೇಜಿನಲ್ಲಿ ಪ್ರವೇಶ ಪಡೆದಿರುವರು ಎನ್ನಲಾಗಿದೆ.
ಕಡಬ ಪೊಲೀಸರು ಸ್ಥಳಕ್ಕೆ ಆಗಮಿಸಿ ಕೇಸು ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

