ದಕ್ಷಿಣ ಕನ್ನಡ

ಸಾಂಕ್ರಾಮಿಕ ರೋಗ ತಡೆಗೆ ಕೈಜೋಡಿಸಿ

Published On :

ಮಂಗಳೂರು: ಮಲೇರಿಯಾ, ಡೆಂಘಿ ಸೇರಿದಂತೆ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಲ್ಲಿ ಆರೋಗ್ಯ ಇಲಾಖೆ ಜತೆ ಇತರ ಇಲಾಖೆಗಳು ಕೈಜೋಡಿಸಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣ ಪ್ರತ್ಯೊಬ್ಬರ ಜವಾಬ್ದಾರಿ ಎಂದು ಮಂಗಳೂರಿನ ಸಹಾಯಕ ಕಮೀಷನರ್ ಸದಾಶಿವ ಪ್ರಭು ಹೇಳಿದ್ದಾರೆ.
ದ.ಕ.ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಮಂಗಳೂರು ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ  ಸಭೆಯಲ್ಲಿ ಮಾತನಾಡಿದರು.
ಪ್ರಸಕ್ತ ಡೆಂಘಿ, ಮಲೇರಿಯಾ ಪ್ರಕರಣಗಳು ಕೇವಲ ನಗರ ಭಾಗಕ್ಕಷ್ಟೇ ಸೀಮಿತವಾಗಿಲ್ಲ, ಗ್ರಾಮೀಣ ಭಾಗದಲ್ಲೂ ಹೆಚ್ಚಾಗಿ ಕಂಡುಬರುತ್ತಿದೆ. ಸಾಂಕ್ರಾಮಿಕ ರೋಗಗಳು ಹರಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು. ಪ್ರತಿ ಮನೆ, ಅಂಗಡಿ, ಶಾಲಾ ವಠಾರಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವುದು ಅತ್ಯಗತ್ಯ. ಮಲೇರಿಯಾ, ಡೆಂಘಿ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಬೇಕು. ದ.ಕ.ಜಿಲ್ಲೆಯನ್ನು ರೋಗಮುಕ್ತ ಜಿಲ್ಲೆ ಮಾಡುವಲ್ಲಿ ಪ್ರತ್ಯೊಬ್ಬರ ಸಹಕಾರ ಬೇಕು ಎಂದರು.
ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಅರುಣ್ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶವನ್ನು ಶುಚಿಯಾಗಿಟ್ಟುಕೊಂಡರೆ ರೋಗಗಳ ನಿಯಂತ್ರಣ ಸಾಧ್ಯ ಎಂದರು.  ತಾಲೂಕು ಆರೋಗ್ಯಾಧಿಕಾರಿ ಡಾ.ರತ್ನಾಕರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಜೇಶ್, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.