ದಕ್ಷಿಣ ಕನ್ನಡ

ಸಮಸ್ಯೆ ಪರಿಹರಿಸುವುದು ಅಧಿಕಾರಿಗಳ ಹೊಣೆ: ಸಚಿವ

Published On :

ಮಂಗಳೂರು:  ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಸಮಸ್ಯೆಗೆ ಮತ್ತು ಪ್ರಾಕೃತಿಕ ವಿಕೋಪ ಹಾನಿಗೆ ತುರ್ತು ಪರಿಹಾರ ನೀಡುವುದು ಎಂಜಿನಿಯರ್ ವಿಭಾಗದ ಹೊಣೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.
ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ಸಭೆ ನಡೆಸಿದ ಖಾದರ್, ನೀರು, ನೈರ್ಮಲ್ಯ ಹಾಗೂ ರಸ್ತೆ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದರು.
ನಮ್ಮ ಗ್ರಾಮ ನಮ್ಮ ರಸ್ತೆಯಡಿ ಬಿಡುಗಡೆಯಾದ ಅನುದಾನ ಸದ್ಬಳಕೆ ಮಾಡಿ, ಜನಸ ಸಮಸ್ಯೆಗೆ ಸ್ಪಂದಿಸಿ, ಮಳೆಗಾಲದಲ್ಲಿ ರಸ್ತೆ ಇಲ್ಲದೆ ಗ್ರಾಮೀಣ ಭಾಗದ ಜನರು ಕಷ್ಟ ಪಡುವಂತೆ ಆಗಬಾರದು. ಅವರಿಗೆ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಆದ್ಯತೆ ನೆಲೆಯಲ್ಲಿ ಕೆಲಸ ಮಾಡಿ ಎಂದರು. ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ನೀರು ಪೂರೈಸಿ, ಯೋಜನೆಗಳನ್ನು ಅರೆಬರೆ ಮಾಡಬೇಡಿ. ಸಿಬ್ಬಂದಿ ಕೊರತೆ ಹೇಳಬೇಡಿ. ಯಾವುದಾದರೂ ಏಜೆನ್ಸಿಗೆ ಕೊಟ್ಟು ಕೆಲಸ ಮಾಡಿಸಿ ಎಂದರು. ಮಂಗಳೂರು ಹಾಗೂ ಬಂಟ್ವಾಳ ವ್ಯಾಪ್ತಿ ಕಾಮಗಾರಿಗಳ ಮಾಹಿತಿ ಪಡೆ, ಸಮಯ ಮಿತಿ ನಿಗದಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.