ಕಟೀಲು ಗ್ರಾಪಂ ನಾಮಕರಣಕ್ಕೆ ಒತ್ತಾಯ
ಮೂಲ್ಕಿ: ಮೆನ್ನಬೆಟ್ಟು ಗ್ರಾಮ ಪಂಚಾಯ್ತಿಯನ್ನು ಕಟೀಲು ಗ್ರಾಪಂ ಆಗಿ ನಾಮಕರಣ ಮಾಡುವ ಬಗ್ಗೆ ಮೆನ್ನಬೆಟ್ಟು ಗ್ರಾಮಸಭೆಯಲ್ಲಿ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.
ಕೊಂಡೆಮೂಲ, ಮೆನ್ನಬೆಟ್ಟು, ನಡುಗೋಡು ಹಾಗೂ ಕಿಲೆಂಜೂರು ಗ್ರಾಮ ಗಳನ್ನೊಳಗೊಂಡ ಮೆನ್ನಬೆಟ್ಟು ಗ್ರಾಮ ಪಂಚಾಯಿಯ 2013-14ನೇ ಸಾಲಿನ ಪ್ರಥಮ ಗ್ರಾಮಸಭೆ ನಡೆಯಿತು.
ಮೆನ್ನಬೆಟ್ಟು ಪಂಚಾಯ್ತಿ ವ್ಯಾಪ್ತಿಯಲ್ಲಿ ಶ್ರೀಕ್ಷೇತ್ರ ಕಟೀಲು ಇದ್ದು, ಮೆನ್ನಬೆಟ್ಟು ಗ್ರಾಮ ಪಂಚಾಯ್ತಿಯನ್ನು ಕಟೀಲು ಗ್ರಾಮ ಪಂಚಾಯ್ತಿ ಆಗಿ ಪರಿವರ್ತಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಇದರಿಂದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಗ್ರಾಮಸ್ಥರು ತಿಳಿಸಿದರು.
ಸಮಗ್ರ ಜಲ ನಿರ್ವಹಣೆ ಯೋಜನೆ: ಗ್ರಾಪಂ ವ್ಯಾಪ್ತಿಯಲ್ಲಿ ಜಲಾನಯನ ಇಲಾಖೆಯಿಂದ ಸಮಗ್ರ ಜಲ ನಿವರ್ಹಣೆ ಯೋಜನೆ ರೂಪಿಸಲಾಗಿದ್ದು, ಯೋಜನೆಯು ಮುಂದಿನ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ಜಾರಿಗೊಳ್ಳಲಿದೆ ಎಂದು ಅಧಿಕಾರಿ ವಸಂತ ಕುಲಕರ್ಣಿ ತಿಳಿಸಿದರು.
ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರು ಗ್ರಾಮ ಪಂಚಾಯಿತಿಯ 19 ಗ್ರಾಮಗಳಿಗೆ ರು. 6.23 ಕೋಟಿ ವೆಚ್ಚದ ಯೋಜನೆ ಮಂಜೂರಾಗಿದ್ದು, ಇದರಲ್ಲಿ ರೈತರ ಸ್ವಸಹಾಯ ಸಂಘ, ನೀರು ಇಂಗಿಸುವಿಕೆ, ಸಸಿ ನೆಡವುದು, ಕಿಂಡಿ ಅಣೆಕಟ್ಟು ನಿರ್ಮಾಣ ಸೇರಿದಂತೆ ಹಲವಾರು ಯೋಜನೆಗಳನ್ನು ಕಾರ್ಯಗತಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಜಲ್ಲಿಗುಡ್ಡೆ ಮತ್ತು ಮೆನ್ನಬೆಟ್ಟಿನಲ್ಲಿ ಅಂಗನವಾಡಿ ನಿರ್ಮಿಸಲು ಸ್ಥಳ ನಿಗದಿಪಡಿಸುವ ಬಗ್ಗೆ ತಹಸೀಲ್ದಾರ್ಗೆ ಪತ್ರ ಬರೆಯಲು ಸಭೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದರು. ಕಮ್ಮಡೆಯಲ್ಲಿ ರಸ್ತೆ ಅವ್ಯವಸ್ಥೆ ಬಗ್ಗೆ ಗ್ರಾಮಸ್ಥರು ದೂರಿದರು. ಜಲ್ಲಿಗುಡ್ಡೆಯಲ್ಲಿ ನೀರಿನ ಸಮಸ್ಯೆ ಬಗ್ಗೆ ಅಲ್ಲಿನ ಗ್ರಾಮಸ್ಥರು ಸಭೆಯ ಗಮನಕ್ಕೆ ತಂದರು.
ಸಭೆಯ ಅಧ್ಯಕ್ಷತೆಯನ್ನು ಪಂಚಾಯ್ತಿ ಅಧ್ಯಕ್ಷ ಜನಾರ್ದನ ಕಿಲೆಂಜೂರು ವಹಿಸಿದ್ದರು. ಜಲಾನಯನ ಇಲಾಖೆ ಅಧಿಕಾರಿ ಯುವರಾಜ್, ಉಪಾಧ್ಯಕ್ಷೆ ಸರೋಜಿನಿ, ಪಿಡಿಒ ಗಣೇಶ್ ಬಂಗೇರ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

