ದಕ್ಷಿಣ ಕನ್ನಡ

ಬಿಜೆಪಿಗೆ ನಿರಂತರ ಜನ ಬೆಂಬಲ

Published On :

ಮೂರ್ನಾಡು: ಕೊಡಗಿನಲ್ಲಿ ಬಿಜೆಪಿಗೆ ಜನ ಬೆಂಬಲ ನಿರಂತರ ದೊರಕುತ್ತಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಅಭಿಪ್ರಾಯಪಟ್ಟಿದ್ದಾರೆ.
ಮೂರ್ನಾಡು ಬಿಜೆಪಿ ಸ್ಥಾನೀಯ ಸಮಿತಿಯ ವತಿಯಿಂದ ಇಲ್ಲಿನ ಕೊಡವ ಸಮಾಜದಲ್ಲಿ ಗುರುವಾರ ಏರ್ಪಡಿಸಲಾದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಜಾತಿ ರಾಜಕಾರಣ ಮೆಟ್ಟಿ ನಿಂತೆವು: ಕಳೆದ ಚುನಾವಣೆಯಲ್ಲಿ ಜಾತಿ ರಾಜಕಾರಣವಿದ್ದು ಅದನ್ನು ಬಿಜೆಪಿ ಕಾರ್ಯಕರ್ತರು ಮೆಟ್ಟಿನಿಂತು ಗೆಲವಿಗೆ ಕಾರಣವಾಗಿದ್ದಾರೆ. ರಾಜ್ಯದಲ್ಲಿ ಪಕ್ಷ ಸೋತಿದ್ದರಿಂದ ಕಾರ್ಯಕರ್ತರು ನಿರಾಶೆಗೊಳ್ಳುವುದು ಬೇಡ. ಮುಂದೆ ಸಹಕಾರಿ ಸಂಘಗಳ ಹಾಗೂ ಲೋಕಸಭಾ ಚುನಾವಣೆಗಳು ಬರಲಿದ್ದು ಕಾರ್ಯಕರ್ತರು ಈಗಿನಿಂದಲೇ ಸಿದ್ಧತೆಗೊಳ್ಳಬೇಕಾಗಿದೆ. ಕಾರ್ಯಕರ್ತರು ಕ್ರಿಯಾಶೀಲರಾಗಿದ್ದಲ್ಲಿ ಬಿಜೆಪಿ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯ ಎಂದರು.
ಕಾರ್ಯಕರ್ತರ ಶ್ರಮ: ಸನ್ಮಾನ ಸ್ವೀಕರಿಸಿದ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಸರ್ಕಾರದೊಂದಿಗೆ ಹೋರಾಟ ಮಾಡಿ ಕೊಡಗಿನಲ್ಲಿ ಹಿಂದೆಂದೂ ಕಾಣದ ಬದಲಾವಣೆಗಳನ್ನು ತಂದ ಫಲ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಜಿಲ್ಲೆಯಲ್ಲಿ ಮತ್ತೆ ಬಿಜೆಪಿಗೆ ಗೆಲವು ದೊರೆತಿದೆ. ರಾಜ್ಯದಲ್ಲಿ ಬಿಜೆಪಿ ಮಾಡಿದ ಅಭಿವೃದ್ಧಿ ಕಾರ್ಯಗಳಷ್ಟು ಯಾವ ಸರ್ಕಾರವೂ ಮಾಡಿಲ್ಲ. ಇಬ್ಬರೂ ಶಾಸಕರು ಕೊಡಗಿನ ಅಭಿವೃದ್ಧಿಯ ಬಗ್ಗೆ ಚಿಂತನೆ ನಡೆಸಿ ಸಾಕಷ್ಟು ಅಭಿವೃದ್ಧಿಗಳು ನಡೆದಿವೆ ಎಂದರು.
ಕಾಂಗ್ರೆಸ್ ಸರ್ಕಾರ ಜನರಿಗೆ ಉಪಯುಕ್ತ ಯೋಜನೆಗಳನ್ನು ಕೈಗೊಳ್ಳುವುದಿಲ್ಲ. ಸರ್ಕಾರ ಬಹು ಕಾಲದವರೆಗೆ ಉಳಿಯುವುದಿಲ್ಲ ಎಂದು ತಿಳಿಸಿ ಸ್ಥಾನೀಯ ಸಮಿತಿ ವ್ಯಾಪ್ತಿಯಲ್ಲಿ ಮುಂದೆ ಆಗಬೇಕಾಗಿರುವ ಕಾಮಗಾರಿ ಪಟ್ಟಿಗಳನ್ನು ಮಾಡಬೇಕಾಗಿದೆ ಅದರ ಪ್ರಕಾರ ಕಾಮಗಾರಿ ನಡೆಸಲಾಗುತ್ತದೆ ಎಂದರು.
ಮೂರ್ನಾಡು ಸ್ಥಾನೀಯ ಸಮಿತಿ ಅಧ್ಯಕ್ಷ ಮುಂಡಂಡ ಕುಟ್ಟಪ್ಪ ಅಧ್ಯಕ್ಷತೆ ವಹಿಸಿದ್ದರು.
ಸ್ಥಾನೀಯ ಸಮಿತಿ ಉಪಾಧ್ಯಕ್ಷ ಬಿ.ಕೆ. ಪೂವಪ್ಪ, ಕಾರ್ಯದರ್ಶಿ ಕೊಂಪುಳಿರ ಲುಶ್ವಪತಿ, ಜಿಲ್ಲಾ ಪಂಚಾಯಿತಿ ಸದಸ್ಯ ಕಡ್ಡಿ ಸುಂದರ, ಆರ್.ಎಂ.ಸಿ ಅಧ್ಯಕ್ಷ ಪುದಿಯೊಕ್ಕಡ ಬೆಲ್ಲು ಸೋಮಯ್ಯ, ಚೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿ ಅಧ್ಯಕ್ಷ ಅರುಣ್ ಅಪ್ಪಚ್ಚು ಇದ್ದರು.  ಸ್ಥಾನೀಯ ಸಮಿತಿ ಕಾರ್ಯದರ್ಶಿ ಕೊಂಪುಳಿರ ಲುಶ್ವಪತಿ ಸ್ವಾಗತಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.