ದಕ್ಷಿಣ ಕನ್ನಡ

ಮದ್ಯ ಸೇವಿಸಿ ಚಾಲನೆ: ರಸ್ತೆಯಲ್ಲೇ ಆ್ಯಂಬುಲೆನ್ಸ್ ಪಲ್ಟಿ, ಇಬ್ಬರಿಗೆ ಗಾಯ

Published On :

ಬಂಟ್ವಾಳ: ಚಿಂತಾಜನಕ ಸ್ಥಿತಿಯಲ್ಲಿದ್ದ ಹಾಸನದ ಮಹಿಳಾ ರೋಗಿಯನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್‌ನ ಚಾಲಕರು ಮದ್ಯ ಸೇವಿಸಿ ಚಲಾಯಿಸಿದ್ದರಿಂದ ಆ್ಯಂಬುಲೆನ್ಸ್ ರಸ್ತೆಯಲ್ಲೇ ಉರುಳಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ವಿವರ: ಹಾಸನದ ಖಾಸಗಿ ಆಸ್ಪತ್ರೆಗೆ ಸೇರಿದ ಆ್ಯಂಬುಲೆನ್ಸ್‌ನಲ್ಲಿದ್ದ ಚಾಲಕ ನಾಗರಾಜ ಹಾಗೂ ಗಣೇಶ್ ಎಂಬಿಬ್ಬರು ಈ ಅವಾಂತರಕ್ಕೆ ಕಾರಣವೆನ್ನಲಾಗಿದ್ದು, ಘಟನೆಯಲ್ಲಿ ಗಾಯಗೊಂಡಿರುವ ಹಾಸನದ ಸುಬೈದಾ ಭಾನು (65) ಹಾಗೂ ಅಮೀರ್ ಜಾ (69) ಎಂಬವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೊಂದಿಗೆ ಆ್ಯಂಬುಲೆನ್ಸ್‌ನಲ್ಲಿ ಪಯಣಿಸುತ್ತಿದ್ದ ಕೌಸರ್ ಹಾಗೂ ಇನ್ನೊಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ವಿಷ ಸೇವಿಸಿ ಅಸ್ವಸ್ಥರಾಗಿದ್ದ ಸುಬೈದಾ ಭಾನು ಅವರನ್ನು ಚಿಕಿತ್ಸೆಗಾಗಿ ಹಾಸನದಿಂದ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.  ಗುಂಡ್ಯದಲ್ಲಿ ಊಟಕ್ಕೆಂದು ರೋಗಿ ಕಡೆಯವರಲ್ಲಿ ಹಣ ಪಡೆದುಕೊಂಡ ಆ್ಯಂಬುಲೆನ್ಸ್ ಸಿಬ್ಬಂದಿ ಮದ್ಯ ಸೇವಿಸಿ ಬಂದು ವಾಹನ ಚಲಾಯಿಸಿದ್ದರು ರೋಗಿ ಕಡೆಯವರು ಅಪಘಾತವಾಗದಂತೆ ಜಾಗ್ರತೆ ವಹಿಸುವಂತೆ ತಿಳಿಸಿದ್ದರು ಎನ್ನಲಾಗಿದೆ.   ಮದ್ಯ ಸೇವಿಸಿದ್ದ ಚಾಲಕ ನಿರ್ಲಕ್ಷ್ಯತನದಿಂದ ಆ್ಯಂಬ್ಯುಲೆನ್ಸ್ ಚಲಾಯಿಸಿದ್ದು, ಬುಡೋಳಿ ತಲುಪುತ್ತಿದ್ದಂತೆಯೇ ರಸ್ತೆಯಲ್ಲಿ ಮಗುಚಿ ಬಿತ್ತೆನ್ನಲಾಗಿದೆ. ಘಟನೆಯ ತೀವ್ರತೆಗೆ ಅಸ್ವಸ್ಥ ಸ್ಥಿತಿಯಲ್ಲಿದ್ದ ಸುಬೈದಾ ಭಾನು ಹಾಗೂ ಅವರೊಂದಿಗಿದ್ದ ಅಮೀರ್ ಜಾ ಅವರಿಗೆ ತೀವ್ರ ಗಾಯಗಳಾಗಿವೆ.  ಪರಾರಿಯಾಗಲೆತ್ನಿಸಿದ ಆ್ಯಂಬುಲೆನ್ಸ್ ಸಿಬ್ಬಂದಿಯನ್ನು ಸ್ಥಳೀಯರು ವಿಟ್ಲ ಪೊಲೀಸರಿಗೊಪ್ಪಿಸಿದ್ದಾರೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಿ. ವಿದ್ಯಾನಂದ ಜೈನ್ ನಿಧನ
ಬಂಟ್ವಾಳ:  ಬಿ.ಸಿ. ರೋಡು ನಿವಾಸಿ ಪಿ. ವಿದ್ಯಾನಂದ ಜೈನ್ (54) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇವರು ಬಲ್ಲಾಳ್ ಮೋಟಾರ್ಸ್‌ನಲ್ಲಿ ನಿರ್ವಾಹಕರಾಗಿದ್ದರು. ಮೂಲತಃ ಪುತ್ತೂರು ನಿವಾಸಿಯಾಗಿದ್ದ ಇವರು ಕೆಲವು ವರ್ಷದಿಂದ ಬಿ.ಸಿ. ರೋಡಿನಲ್ಲಿ ವಾಸ್ತವ್ಯವಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.