ಭ್ರಷ್ಟಾಚಾರರಹಿತ ಆಡಳಿತ: ಸೊರಕೆ
ಮಂಗಳೂರು: 'ಕೆಳಹಂತದ ವರ್ಗ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜನತೆಗೆ ಉತ್ತಮ, ಭ್ರಷ್ಟಾಚಾರ ರಹಿತ ಆಡಳಿತ ನೀಡಲು ಉದ್ದೇಶಿಸಿದೆ' ಎಂದು ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ನಾರಾಯಣಗುರು ಯುವವೇದಿಕೆ ವತಿಯಿಂದ ಭಾನುವಾರ ಪುರಭವನದಲ್ಲಿ ನಡೆದ ಬ್ರಹ್ಮಶ್ರೀ ಚಿನ್ನದ ಪದಕ, ವಿದ್ಯಾರ್ಥಿ ವೇತನ ಸಮಾರಂಭದಲ್ಲಿ ಅವರು ಮಾತನಾಡಿದರು.
ಹಿಂದುಳಿದ ವರ್ಗದ ವ್ಯಕ್ತಿ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದು, 8ನೇ ಬಾರಿ ಬಜೆಟ್ ಮಂಡನೆ ಮಾಡುವ ರಾಜ್ಯದ ಪ್ರಥಮ ವ್ಯಕ್ತಿಯಾಗಿದ್ದಾರೆ ಎಂದರು.
ಶಿಕ್ಷಣದಿಂದ ವಿದ್ಯಾರ್ಥಿಗಳ ಪ್ರತಿಭೆ ಹೊರಹೊಮ್ಮಲು ಸಾಧ್ಯವಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳು ಡಾಕ್ಟರ್, ಎಂಜಿನಿಯರಿಂಗ್ ವೃತ್ತಿ ಆರಿಸದೆ ಕೆಎಎಸ್, ಐಪಿಎಸ್, ಎಂಬಿಎ ಕೋರ್ಸುಗಳಿಗೂ ಮಾನ್ಯತೆ ನೀಡಿದರೆ ಉತ್ತಮ ಎಂದರು.
ಕಾರ್ಕಳ ಶಾಸಕ ಸುನೀಲ್ ಕುಮಾರ್ ಮಾತನಾಡಿ, ಕಾರ್ಕಳದಲ್ಲಿ ಸುಮಾರು ರು. 3 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕೋಟಿ-ಚೆನ್ನಯ್ಯ ಥೀಂ ಪಾರ್ಕ್ಗೆ ಯುವ ವೇದಿಕೆ, ಸಂಘಟನೆಗಳು ಭೇಟಿ ನೀಡಬಹುದು. ಇನ್ನಷ್ಟು ಅಭಿವೃದ್ಧಿಗೊಂಡು ಪಾರ್ಕ್ ಪ್ರವಾಸಿ ತಾಣವಾಗಿ ಪರಿವರ್ತನೆಗೊಳ್ಳಲಿ ಎಂದರು.
ಧರ್ಮಸ್ಥಳ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿದರು
ಚಿನ್ನದ ಪದಕ ಪ್ರದಾನ: 2013ನೇ ಸಾಲಿನ ಎಸ್ಎಸ್ಎಲ್ಸಿಯಲ್ಲಿ ಶೇ. 98 ಅಂಕ ಗಳಿಸಿದ ಮಣ್ಣಗುಡ್ಡೆ ನಿವಾಸಿ ನಿಶ್ಮಿತಾ ಬರ್ಕೆ ಅವರಿಗೆ ಬ್ರಹ್ಮಶ್ರೀ ಚಿನ್ನದ ಪದಕ ನೀಡಿ ಗೌರವಿಸಲಾಯಿತು.
ಒಟ್ಟು 50 ಮಂದಿ ವಿದ್ಯಾರ್ಥಿಗಳಿಗೆ ರು. 1ಸಾವಿರದಂತೆ ವಿದ್ಯಾರ್ಥಿ ವೇತನ ನೀಡಲಾಯಿತು. ಸುಮಾರು 2.5 ಲಕ್ಷ ವೆಚ್ಚದಲ್ಲಿ 150 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಿಸಲಾಯಿತು. ಸಿಇಟಿಯಲ್ಲಿ ಹೆಚ್ಚು ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಕ್ರೀಡೆ ಪ್ರತಿಭಾನ್ವಿತರನ್ನು ಗೌರವಿಸಲಾಯಿತು. ಬೆಳ್ತಂಗಡಿ ಶಾಸಕ ವಸಂತ ಬಂಗೇರ ಉದ್ಘಾಟಿಸಿದರು. ಯುವವೇದಿಕೆ ಅಧ್ಯಕ್ಷ ಶಿವರಾಜ್ ಅಧ್ಯಕ್ಷತೆ ವಹಿಸಿದ್ದರು.
ನಿವೃತ್ತ ಮುಖ್ಯೋಪಾಧ್ಯಾಯ ಕುಪ್ಪೆಪದವು ಬಾರ್ದಿಲ ಎಸ್. ನಾಗೇಶ್ ಪೂಜಾರಿಗೆ ಗುರುವಂದನೆ ಮಾಡಲಾಯಿತು.
ವೇದಿಕೆಯ ಸಲಹಾ ನಿರ್ದೇಶಕನೀಲಯ ಎಂ. ಅಗರಿ, ಎಂ.ಎಸ್. ಕೋಟ್ಯಾನ್, ಸುಧಾಕರ ಕರ್ಕೇರಾ ಅವರನ್ನು ಸನ್ಮಾನಿಸಲಾಯಿತು.
ಮಾನವ ಸಂಪನ್ಮೂಲ ವಿಭಾಗದ ಶಾಖಾಧಿಕಾರಿ ಶಕೀಲಾ ಆರ್ ಉಚ್ಚಿಲ, ಸಂಪೂರ್ಣವತಿಯಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

