ದಕ್ಷಿಣ ಕನ್ನಡ

ಜು.22ರಿಂದ ರಾಘವೇಶ್ವರ ಶ್ರೀ ಚಾತುರ್ಮಾಸ್ಯ: ಪೂರ್ವಭಾವಿ ಸಭೆ

Published On :

ವಿಟ್ಲ: ಮಾಣಿ ಶ್ರೀರಾಮಚಂದ್ರಾಪುರ ಮಠದಲ್ಲಿ ಜು.22ರಿಂದ ಸೆ.19ರತನಕ ಹೊಸನಗರ ಶ್ರೀರಾಘವೇಶ್ವರ ಭಾರತಿ ಸ್ವಾಮೀಜಿ ಕೈಗೊಳ್ಳಲಿರುವ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ನಿರ್ಮಾಣಗೊಂಡ ವಿಜಯ ಚಾತುರ್ಮಾಸ್ಯ ಸೇವಾ ಸಮಿತಿ ಮತ್ತು ಉಪಸಮಿತಿಗಳ ಸಭೆ ಭಾನುವಾರ ನಡೆಯಿತು. ಸಮಿತಿ ಕಾರ್ಯಾಧ್ಯಕ್ಷ ಹಾರಕರೆ ನಾರಾಯಣ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀಗಳು ಜು.20ರಂದು ಪುರಪ್ರವೇಶ ಮಾಡಲಿದ್ದು, ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಿಂದ ವಾಹನ ಮೆರವಣಿಗೆಯಲ್ಲಿ ಹೊರಟು, ಮಾಣಿಯಿಂದ ಮಠಕ್ಕೆ ಪಾದಯಾತ್ರೆ ಮೂಲಕ ಆಗಮಿಸಲಿದ್ದಾರೆ. 60 ದಿನಗಳ ಈ ಕಾರ್ಯಕ್ರಮದಲ್ಲಿ 21 ದಿನಗಳ ಶ್ರೀರಾಮಕಥಾ ನಡೆಯಲಿದೆ ಎಂದರು. ಸೆ.19ರಂದು ಸೀಮೋಲ್ಲಂಘನೆ ನಡೆಯಲಿದ್ದು, ಈ ಬಾರಿ ವಿಶೇಷವಾಗಿ 'ಮುಕುಟ ಮಂಗಲ' ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿವರಿಸಿದರು. ಪ್ರಧಾನ ಕಾರ್ಯದರ್ಶಿ ಸೇರಾಜೆ ಸುಬ್ರಹ್ಮಣ್ಯ ಭಟ್ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ನೂಜಿ ವೆಂಕಟೇಶ್ವರ ಭಟ್ ಉಪಸಮಿತಿಗಳ ಜವಾಬ್ದಾರಿಗಳನ್ನು ವಿತರಿಸಿ, ಸಲಹೆ ಸೂಚನೆಗಳನ್ನು ಆಹ್ವಾನಿಸಿದರು. ಸಭೆಯಲ್ಲಿ ಎಲ್ಲ ಉಪಸಮಿತಿಗಳ ಜವಾಬ್ದಾರಿ, ಬಜೆಟ್, ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.