ದ.ಕ. ಎಸ್ಪಿ ಕಚೇರಿಯಲ್ಲಿ ಬಹು ಆಪ್ತ ಸಮಾಲೋಚನಾ ಕೇಂದ್ರ
ಮಂಗಳೂರು: ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಶೀಘ್ರವೇ ಬಹು ಆಪ್ತ ಸಮಾಲೋಚನಾ ಕೇಂದ್ರ ತೆರೆಯಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗೋಯಲ್ ಹೇಳಿದ್ದಾರೆ.
ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಹಿರಿಯ ನಾಗರಿಕರು, ಮಹಿಳೆ ಮತ್ತು ಮಕ್ಕಳ ಸಹಾಯವಾಣಿಗೆ ದೂರುಗಳು ಬಂದಾಗ ಈ ಸಹಾಯವಾಣಿಗಳ ಸಮನ್ವಯತೆಯಾಗಿ ಈ ಕೇಂದ್ರ ಕಾರ್ಯನಿರ್ವಹಿಸಲಿದೆ. ಪೊಲೀಸ್ ಇಲಾಖೆಯಲ್ಲಿ ಆಪ್ತ ಸಮಾಲೋಚನೆ ವ್ಯವಸ್ಥೆ ಇಲ್ಲ. ಇದಕ್ಕೆ ಕಚೇರಿಯಲ್ಲಿ ಅಗತ್ಯ ಸ್ಥಳ ಒದಗಿಸಲಾಗುವುದು. ಉಳಿದ ವ್ಯವಸ್ಥೆಯನ್ನು ಎನ್ಜಿಒಗಳು ಮಾಡಿಕೊಳ್ಳಬೇಕು. ಕಾನೂನು ಸೇವಾ ಪ್ರಾಧಿಕಾರ, ಎಸ್ಡಿಎಂ ಕಾನೂನು ಕಾಲೇಜು ವಿದ್ಯಾರ್ಥಿಗಳ ನೆರವಿನೊಂದಿಗೆ ಅಗತ್ಯ ಇರುವವರಿಗೆ ಕಾನೂನು ಸಲಹೆ ನೀಡಲಾಗುವುದು ಎಂದರು.
ನಾಳೆ ಕಾಮಗಾರಿ ಪರಿಶೀಲನೆ: ಬೆಳ್ತಂಗಡಿಯ ನಕ್ಸಲ್ ಬಾಧಿತ ಪ್ರದೇಶಗಳಿಗೆ ಕಳೆದ ವರ್ಷ ರು. 5 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಇದರಲ್ಲಿ ರು. 3.98 ಕೋಟಿ ಹಂಚಿಕೆಯಾಗಿದೆ. ಇಲ್ಲಿ ರಸ್ತೆ, ಚರಂಡಿ, ಸೇತುವೆ, ಸೌರ ದೀಪ ಅಳವಡಿಕೆ ಕಾರ್ಯ ನಡೆಯುತ್ತಿದೆ. ಜಿಲ್ಲಾ ಪಂಚಾಯ್ತಿ ಎಂಜಿನಿಯರಿಂಗ್ ವಿಭಾಗ, ನಿರ್ಮಿತಿ ಕೇಂದ್ರ, ಲೋಕೋಪಯೋಗಿ ಇಲಾಖೆ ಕಾಮಗಾರಿ ಕೈಗೆತ್ತಿಕೊಂಡಿದೆ. ಆದರೆ ಕಾಮಗಾರಿ ನಿರೀಕ್ಷಿತ ರೀತಿಯಲ್ಲಿ ನಡೆಯುತ್ತಿಲ್ಲ. ಶೇ.50ರಷ್ಟು ಮಾತ್ರ ಕಾಮಗಾರಿ ಆಗಿದ್ದು, ಜೂ.18ರಂದು ಗೃಹ ಸಚಿವರು ಕಾರ್ಕಳದಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದರು.
ವಿಟ್ಲ ಎಸ್ಐ ಮಾಧವ ಕೂಡ್ಲು ಅಮಾನತು ಇಲಾಖೆಯ ಆಂತರಿಕ ವಿಚಾರ. ನಾಪತ್ತೆಯಾದ ಇಮ್ತಿಯಾಜ್ ಪತ್ತೆಗೆ ವಿಫಲರಾದ ಕಾರಣಕ್ಕೆ ಎಸ್ಐಯನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಯಾವುದೇ ಒತ್ತಡ ಇರಲಿಲ್ಲ. ಪ್ರಕರಣವನ್ನು ಡಿವೈಎಸ್ಪಿ ಸದಾನಂದ ವರ್ಣೇಕರ್ಗೆ ಹಸ್ತಾಂತರಿಸಿದ ಬಳಿಕವಷ್ಟೇ ಇಮ್ತಿಯಾಜ್ನನ್ನು ಪತ್ತೆಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
---
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

