ದಕ್ಷಿಣ ಕನ್ನಡ

ಶಿಕ್ಷಕರ ನಿವೃತ್ತಿ ಮಾ.31ಕ್ಕೆ ನಿಗದಿ

Published On :

ಬೆಳ್ತಂಗಡಿ: ಶೈಕ್ಷಣಿಕ ಅವಧಿಯ ಮಧ್ಯದಲ್ಲಿ ಶಿಕ್ಷಕರು ನಿವೃತ್ತರಾಗುವುದರಿಂದ ವಿದ್ಯಾರ್ಥಿಗಳಿಗೆ ಆಗುವ ತೊಂದರೆ ತಪ್ಪಿಸಲು ಶಿಕ್ಷಕರ ನಿವೃತ್ತಿಯನ್ನು ಮಾ.31ಕ್ಕೆ ನಿಗದಿಪಡಿಸಲು ಹಣಕಾಸು ಇಲಾಖೆ ಮೌಖಿಕ ಆದೇಶ ನೀಡಿದ್ದು, ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ.
ಇಲ್ಲಿನ ಸುವರ್ಣ ಆರ್ಕೆಡ್‌ನಲ್ಲಿ ಭಾನುವಾರ ಬೆಳ್ತಂಗಡಿ ತಾಲೂಕು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ಸಂಘ ವತಿಯಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ವರ್ಗಾವಣೆ ನೀತಿ ಮಾರ್ಪಾಡು: ರಾಜ್ಯದಲ್ಲಿ ಸುಮಾರು 10 ಸಾವಿರ ಶಿಕ್ಷಕರು ವರ್ಗಾವಣೆ ಬಯಸಿದ್ದಾರೆ. ವರ್ಗಾವಣೆ ನೀತಿ ಮಾರ್ಪಾಡಿಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ವಲಯವಾರು ವರ್ಗಾವಣೆ ಮಾಡುವ ಬಗ್ಗೆಯೂ ಚಿಂತಿಸಲಾಗುವುದು ಎಂದ ಅವರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದೇ ಶಾಲೆಯಡಿ ವಿದ್ಯಾರ್ಥಿಗಳಿಗೆ ಶಿಕ್ಷಣದ ವ್ಯವಸ್ಥೆ ಮಾಡಿ ಸರ್ಕಾರಿ ವೆಚ್ಚದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.
ಶಾಸಕ ಕೆ.ವಸಂತ ಬಂಗೇರ ಅಧ್ಯಕ್ಷತೆ ವಹಿಸಿ, ಶಿಕ್ಷಕರ ವರ್ಗಾವಣೆಯಲ್ಲಿ ಸರಿಯಾದ ಕ್ರಮ ಕೈಗೊಳ್ಳಬೇಕು. ಇಲಾಖೆಯ ನ್ಯೂನತೆಗಳನ್ನು ಸರಿಪಡಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸುಮಂಗಲಾ ಪಿ.ಕುಚಿನಾಡ್, ಜಿಲ್ಲಾ ಪಂಚಾಯಿತಿ ಸದಸ್ಯ ಶೈಲೇಶ್ ಕುಮಾರ್, ತೀರ್ಥಹಳ್ಳಿ ತಾಲೂಕು ಪಂಚಾಯಿತಿ ಸದಸ್ಯ ಬಾಳೆಹಳ್ಳಿ ಪ್ರಭಾಕರ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ರಾಜಗುರು ಹೆಬ್ಬಾರ್, ಸೋಮಶೇಖರ್ ಶೆಟ್ಟಿ, ರಮೇಶ್ ಮಯ್ಯ ಇದ್ದರು.
ನಿರಂಜನ್ ಜೈನ್ ಸ್ವಾಗತಿಸಿದರು. ಧರಣೇಂದ್ರ ಕೆ.ಜೈನ್ ಕಾರ್ಯಕ್ರಮ ನಿರೂಪಿಸಿದರು. ರಾಜಗುರು ಹೆಬ್ಬಾರ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.