ದಕ್ಷಿಣ ಕನ್ನಡ

ಮಳೆ ನಿರಂತರ, ಕುಡಿವ ನೀರಿಗೆ ಹಾಹಾಕಾರ!

Published On :

ಸುಳ್ಯ: ಸುಳ್ಯದಲ್ಲಿ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಪಯಸ್ವಿನಿ ನದಿ ತುಂಬಿ ಹರಿಯುತ್ತಿದೆ. ಆದರೆ, ನಗರದೊಳಗಡೆಯೇ ಇರುವ ಬೋರುಗುಡ್ಡೆ ವಾರ್ಡ್ನ ಜನತೆ ಮಾತ್ರ ನೀರಿಲ್ಲದೆ ಪರದಾಡುತ್ತಿದ್ದಾರೆ.
ಕಳೆದ ಕೆಲವು ದಿನಗಳಿಂದ ನಗರ ಪಂಚಾಯಿತಿಯ ನೀರು ಸರಬರಾಜು ಮಾಡುವ ವ್ಯವಸ್ಥೆ ಈ ಪ್ರದೇಶದಲ್ಲಿ ಕೈ ಕೊಟ್ಟಿದೆ. ಸುಮಾರು 22ಕ್ಕೂ ಹೆಚ್ಚು ಮನೆಗಳಿರುವ ಈ ಪ್ರದೇಶದಲ್ಲಿ ಕುಡಿಯಲು ಸೇರಿದಂತೆ ಪ್ರಾಥಮಿಕ ಅವಶ್ಯಕತೆಗಳಿಗೆ ಮಳೆ ನೀರನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಈ  ಬಗ್ಗೆ ನ.ಪಂ. ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದ್ದರೂ ಪರಿಣಾಮ ಶೂನ್ಯ. ಸ್ಥಳೀಯ ವಾರ್ಡ್ ಸದಸ್ಯರಾದ ಪ್ರೇಮಾ ಇಲ್ಲಿನ ಮನೆಗಳಿಗೆ ಭೇಟಿ ನೀಡಿ ಸಮಸ್ಯೆಯನ್ನು ನ.ಪಂ. ಗಮನಕ್ಕೆ ತಂದಿದ್ದಾರೆ. ಆದರೆ ಅದರಿಂದ ಯಾವುದೇ ಪ್ರಯೋಜನ ಆಗಿಲ್ಲ.
ಮಳೆ ನೀರಿಗೆ ಮೊರೆ: ಮನೆಯ ಮಹಡಿಯಿಂದ ಪೈಪುಗಳ ಮೂಲಕ ವ್ಯರ್ಥವಾಗಿ ಹೋಗುತ್ತಿದ್ದ ಮಳೆ ನೀರನ್ನು ಇದೀಗ ಇಲ್ಲಿನ ಪ್ರತಿಯೊಂದು ಮನೆಯವರು ಅಮೂಲ್ಯ ಎಂದು ಪರಿಗಣಿಸುತ್ತಿದ್ದಾರೆ. ಕುಡಿಯಲು ಸೇರಿದಂತೆ ಎಲ್ಲಾ ಆವಶ್ಯಕತೆಗಳಿಗೂ ಈ ನೀರನ್ನೇ ಬಳಸುತ್ತಿದ್ದಾರೆ.
ಮಳೆ ನೀರನ್ನು ಕುಡಿಯಲು ಬಳಸುತ್ತಿರುವುದರಿಂದ ಮಕ್ಕಳಿಗೆ ಜ್ವರ ಸೇರಿದಂತೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ಅಹವಾಲು ತೋಡಿಕೊಳ್ಳುತ್ತಿದ್ದಾರೆ.
ಸಮಸ್ಯೆ ಪರಿಹರಿಸದಿದಲ್ಲಿ ನಗರ ಪಂಚಾಯಿತಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.