ದಕ್ಷಿಣ ಕನ್ನಡ

ಹೋಂ ಸ್ಟೇ ಪ್ರಕರಣ: ಪತ್ರಕರ್ತಗೆ ಜಾಮೀನು

Published On :

ಮಂಗಳೂರು: ಮಂಗಳೂರಿನ ಪಡೀಲ್ ಹೋಂ ಸ್ಟೇ ದಾಳಿಯನ್ನು ಚಿತ್ರಿಕರಿಸಿದ ಆರೋಪದಲ್ಲಿ ಜೈಲು ಸೇರಿದ್ದ ಸ್ಥಳೀಯ ಸುದ್ದಿವಾಹಿನಿ ಕ್ಯಾಮೆರಾಮನ್ ಶರಣ್‌ಗೆ ಜಿಲ್ಲಾ ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.  2012 ಜು.31ರಂದು ಪಡೀಲ್ ಹೋಂ ಸ್ಟೇಯಲ್ಲಿ ಯುವಕ, ಯುವತಿಯರು ಹುಟ್ಟುಹಬ್ಬ ಪಾರ್ಟಿ ನಡೆಸುತ್ತಿದ್ದ ವೇಳೆ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ್ದರು. ಇದನ್ನು ಚಿತ್ರಿಕರಿಸಿದ ಇಬ್ಬರು ಪತ್ರಕರ್ತರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದರು. ಪತ್ರಕರ್ತ ನವೀನ್ ಸೂರಿಂಜೆ ಮತ್ತು ಶರಣ್‌ನನ್ನು ಪೊಲೀಸರು ಬಂಧಿಸಿ ಜೈಲಿಗೆ ಹಾಕಿದ್ದರು. 50 ಸಾವಿರ ಬಾಂಡ್ ಭದ್ರತೆ ಮತ್ತು ಜಾಮೀನು ಒದಗಿಸುವಂತೆ ನ್ಯಾಯಾಧೀಶೆ ಉಮಾ ಜಿ. ಸೂಚಿಸಿದ್ದಾರೆ. 2013ರ ಜ.2ರಂದು ಶರಣ್‌ನನ್ನು ಬಂಧಿಸಿದ ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಿದ್ದು, ಅಂದಿನಿಂದ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿದ್ದಾರೆ. ಶರಣ್ ಪರವಾಗಿ ವಕೀಲ ಅರುಣ್ ಬಂಗೇರ ಬೆಳುವಾಯಿ ವಾದಿಸಿದ್ದರು. ಪತ್ರಕರ್ತ ನವೀನ್ ಸೂರಿಂಜೆ ವಿರುದ್ಧ ಪ್ರಕರಣವನ್ನು ಸರ್ಕಾರ ಈಗಾಗಲೇ ಕೈ ಬಿಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.