ಸಿಸಿ ಕ್ಯಾಮೆರಾ ಸಂಚಾರ ನಿರ್ವಹಣೆ ಕೇಂದ್ರ ಉದ್ಘಾಟನೆ
ಉಡುಪಿ: ಸಂಚಾರ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ, ಮಣಿಪಾಲ ಮತ್ತು ಮಲ್ಪೆ ನಗರಗಳ ಆಯಕಟ್ಟಿನ 15 ಸ್ಥಳಗಳಲ್ಲಿ ಕ್ಲೋಸ್ಡ್ ಸರ್ಕ್ಯೂಟ್ ಟಿವಿ (ಸಿಸಿ) ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದನ್ನು ನಿಯಂತ್ರಿಸುವ ಉಡುಪಿ ಟ್ರಾಫಿಕ್ ಮ್ಯಾನೇಜ್ಮೆಂಟ್ ಕೇಂದ್ರವನ್ನು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ರಾಜ್ಯ ಗೃಹಸಚಿವ ಕೆ.ಜೆ. ಜಾರ್ಜ್ ಮಂಗಳವಾರ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಇಂತಹ ವ್ಯವಸ್ಥೆಯನ್ನು ಅಳವಡಿಸಿರುವ 20ನೇ ನಗರ ಉಡುಪಿ ಆಗಿದ್ದು, ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ಇತರ ಕಡೆಗಳಲ್ಲಿ ಈ ವ್ಯವಸ್ಥೆ ಯಶಸ್ವಿಯಾಗಿದೆ ಮತ್ತು ಸಾಕಷ್ಟು ಮಂದಿ ಸಂಚಾರ ಕಾನೂನುಗಳನ್ನು ಉಲ್ಲಂಘಿಸಿರುವವರನ್ನು ಹಿಡಿದು ಶಿಕ್ಷಿಸಲಾಗಿದೆ ಎಂದರು. ಕೇಂದ್ರದ ಕಾರ್ಯವೈಖರಿ ವೀಕ್ಷಿಸಿದ ಗಹಸಚಿವರು, ಈ ಸಿಸಿ ಟಿವಿ ಕ್ಯಾಮೆರಾಗಳು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬಿತ್ಯಾದಿ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು.
30 ದಿನ ದಾಖಲೆ: ಈ ಕ್ಯಾಮೆರಾಗಳಲ್ಲಿ ಪ್ಯಾನ್, ಟಿಲ್ಟ್ ಮತ್ತು ಝೂಮ್ ವ್ಯವಸ್ಥೆಗಳಿದ್ದು, ವಿದ್ಯುತ್ ನಿಲುಗಡೆಯಾದ ಸಂದರ್ಭದಲ್ಲಿಯೂ ಕಾರ್ಯನಿರ್ವಹಿಸುವಂತೆ ಬ್ಯಾಟರಿ ಬ್ಯಾಕ್ಅಪ್ ವ್ಯವಸ್ಥೆ ಮಾಡಲಾಗಿದೆ. ಈ ಸಿ.ಸಿ. ಟಿ.ವಿ. ಕ್ಯಾಮೆರಾಗಳ ದೃಶ್ಯಗಳನ್ನು 30 ದಿನಗಳವರೆಗೆ ದಾಖಲಿಡಬಹುದಾಗಿದೆ.
ಗಡಿ ತಪಾಸಣಾ ಕೇಂದ್ರ: ಈ 15 ಕ್ಯಾಮೆರಾಗಳಲ್ಲದೆ ಖಾಸಗಿ ಹಾಗೂ ಉದ್ಯಮಿಗಳ ಸಹಕಾರದೊಂದಿಗೆ ಇನ್ನೂ 30 ಸಿ.ಸಿ. ಟಿ.ವಿ. ಕ್ಯಾಮೆರಾಗಳನ್ನು ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಈಗಾಗಲೇ ಅಳವಡಿಸಲಾಗಿದೆ. ಇವುಗಳು ಕೂಡ ಜಿಲ್ಲಾ ಪೊಲೀಸ್ ಕಚೇರಿಯಲ್ಲಿರುವ ಟ್ರಾಫಿಕ್ ಮ್ಯಾನೇಜ್ಮೆಂಟ್ ಕೇಂದ್ರದೊಂದಿಗೆ ಜೋಡಿಸಲಾಗಿದೆ.
5 ಕಡೆ ಗಡಿ ತಪಾಸಣೆ: ಜಿಲ್ಲೆಯ 5 ಕಡೆಗಳಲ್ಲಿ ಅಂತರ್ ಜಿಲ್ಲಾ ಅಪರಾಧಗಳನ್ನು ತಡೆಗಟ್ಟಲು ಹಾಗೂ ಪತ್ತೆ ಹಚ್ಚಲು ಅನುಕೂಲವಾಗುವಂತೆ ಗಡಿ ತಪಾಸಣೆ ಕೇಂದ್ರಗಳನ್ನು ತೆರೆಯಲಾಗಿದೆ. ಅವುಗಳಿಗೂ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ, ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್, ರಾಜ್ಯ ಹೆಚ್ಚುವರಿ ಗೃಹ ಕಾರ್ಯದರ್ಶಿ ವಿ. ಉಮೇಶ್, ಪೊಲೀಸ್ ಮಹಾನಿರ್ದೇಶಕ ಲಾಲ್ ಪಚಾವೋ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಉಪಮಹಾನಿರ್ದೇಶಕ ಪ್ರತಾಪ್ ರೆಡ್ಡಿ, ಉಡುಪಿ ಜಿಲ್ಲಾಧಿಕಾರಿ ಡಾ.ಎಂ.ಟಿ. ರೇಜು, ಪೊಲೀಸ್ ವರಿಷ್ಠಾಧಿಕಾರಿ ಡಾ. ಬೋರಲಿಂಗಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

