ದಕ್ಷಿಣ ಕನ್ನಡ

ಬಿಎಸ್‌ವೈ ಬಿಜೆಪಿ ಸೇರ್ಪಡೆ ವರಿಷ್ಠರಿಗೆ ಬಿಟ್ಟದ್ದು: ಸಚಿವ ಸುರೇಶ್ ಕುಮಾರ್

Published On :

ಮಂಗಳೂರು: 'ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಅವರನ್ನು ಪಕ್ಷಕ್ಕೆ ಸೇರಿಸುವ ನಿರ್ಧಾರ ವರಿಷ್ಠರ ವಿವೇಚನೆಗೆ ಬಿಟ್ಟದ್ದು. ವರಿಷ್ಠರ ಅಭಿಪ್ರಾಯಕ್ಕೆ ಒಮ್ಮತವಿದೆ' ಎಂದು ಕಾನೂನು ಮತ್ತು ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
 ಶುಕ್ರವಾರ ಬಿಜೆಪಿ ಕಚೇರಿಯಲ್ಲಿ 'ಸಾರ್ಥಕ ಸಾಧನೆ- ಸರ್ವತೋಮುಖ ಅಭಿವೃದ್ಧಿ ಸಂಕಲ್ಪ' ಎಂಬ ಚಿಂತನೆಗಳ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಹೆಚ್ಚಿನ ಅಭಿವೃದ್ಧಿ ಯೋಜನೆಗಳ ಸೇರ್ಪಡೆಯೊಂದಿಗೆ ವಿವಿಧ ನಾಗರಿಕ ಸೌಲಭ್ಯಗಳನ್ನು ಒದಗಿಸುವಂತೆ ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ ಎಂದರು. ನಗರದಲ್ಲಿ ಬಿಜೆಪಿ ಕಳೆದ 5 ವರ್ಷಗಳಿಂದ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿ ಸಾಧಿಸಿದ್ದು, ಜನಪರ ಸೇವೆಗೆ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಸುರೇಶ್ ಕುಮಾರ್ ಕರೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.