ದಕ್ಷಿಣ ಕನ್ನಡ

ನಿಡ್ಡೋಡಿ ಸ್ಥಾವರ:ಕೆಜೆಪಿ ವಿರೋಧ

Published On :

ಮಂಗಳೂರು: ನಿಡ್ಡೋಡಿಯಲ್ಲಿ ಸ್ಥಾಪನೆಯಾಗಲಿರುವ ಉಷ್ಣ ವಿದ್ಯುತ್ ಸ್ಥಾವರದಿಂದ ಸೋಮೇಶ್ವರ-ಮೂಲ್ಕಿ ಪ್ರದೇಶದ ಸಮುದ್ರದ ನೀರು ವಿಷಮಯವಾಗಿದ್ದು, ಸ್ಥಾವರ ಸ್ಥಾಪನೆಗೆ ಮೀನುಗಾರರು ಪರವಾಗಿ ಕರ್ನಾಟಕ ಜನತಾ ಪಕ್ಷ ವಿರೋಧ ವ್ಯಕ್ತಪಡಿಸಿದೆ.  ಸುಮಾರು 4 ಸಾವಿರ ಎಕರೆ ಪ್ರದೇಶದಲ್ಲಿ 4 ಸಾವಿರ ಮೆಗಾ ವ್ಯಾಟ್ ಉಷ್ಣ ವಿದ್ಯುತ್ ಸ್ಥಾವರಕ್ಕೆ ಬೇಕಾಗುವ ನೀರಿನ ವ್ಯವಸ್ಥೆಯನ್ನು ಸಮುದ್ರದಿಂದಲೇ ಕಲ್ಪಿಸಬೇಕಾಗುತ್ತದೆ. ಇದರಿಂದ ಮುಂದೊಂದು ದಿನ ಜಿಲ್ಲೆಯ ಸಮುದ್ರ ಬಳಕೆಗೆ ಅನರ್ಹವೆಂದು 'ಡೆಡ್ ಸೀ' ಎಂಬುದಾಗಿ ಸರ್ಕಾರ ಘೋಷಣೆಯ ದುರಂತ ಸಂಭವಿಸಬಹುದು ಎಂದು ಕೆಜಿಪಿ ರಾಜ್ಯ ಕಾರ್ಯದರ್ಶಿ ರಾಮಚಂದರ್ ಬೈಕಂಪಾಡಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.  ಈಗಾಗಲೇ ಉಡುಪಿಯ ನಂದಿಕೂರಿನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರದ ತ್ಯಾಜ್ಯದಿಂದ ಸಮುದ್ರ ಮಲೀನಗೊಂಡಿದ್ದು, ಮೀನುಗಾರರು ಕಂಗಲಾಗಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಮೀನುಗಾರಿಕೆ ನಂಬಿರುವ ಮೀನುಗಾರರ ಸಂಘಟನೆಗಳು, ಎಲ್ಲ ವರ್ಗದ ಜನರು ಸಂಘಟಿತರಾಗಿ ಸ್ಥಾವರದ ಸ್ಥಾಪನೆಯನ್ನು ತಡೆಗಟ್ಟುವಲ್ಲಿ ಹೋರಾಟ ನಡೆಸುವ ಅಗತ್ಯವಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.