ಇಂದಿನಿಂದ ಮೂಗು ಉಚಿತ ತಪಾಸಣೆ
ಮಂಗಳೂರು: ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಮಾ. 4 ರಿಂದ 6ರ ತನಕ ಬೆಳಗ್ಗೆ 9.30 ರಿಂದ 4ರ ತನಕ ಉಚಿತ ಮೂಗು ತಪಾಸಣೆ ಶಿಬಿರ ನಡೆಯಲಿದೆ. ಮೂಗಿನಲ್ಲಿ ತಡೆ, ರಕ್ತಸ್ರಾವ, ವಾಸನೆ ಗ್ರಹಿಕೆ ಅಸಾಧ್ಯ, ಮುಖದಲ್ಲಿ ಬಾವು ಇತ್ಯಾದಿ ತೊಂದರೆಗಳ ಬಗ್ಗೆ ಮಾಹಿತಿ ನೀಡಲಾಗುವುದು. ರಿಯಾಯಿತಿ ದರದಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುವುದು. ರೇಡಿಯೊಲಾಜಿ ಇನ್‌ವೆಸ್ಟಿಗೇಶನ್‌ನಲ್ಲಿ ಶೇ. 20 ಹಾಗೂ ಲ್ಯಾಬ್ ಇನ್‌ವೆಸ್ಟಿಗೇಶನ್ ಶೇ. 10 ರಿಯಾಯಿತಿ ನೀಡಲಾಗುತ್ತದೆ ಎಂದು ವೈದ್ಯಾಧಿಕಾರಿ ಡಾ. ಮಧುಸೂದನ್ ಉಪಾಧ್ಯ ತಿಳಿಸಿದ್ದಾರೆ.
ಇಂದು ಕೇಂದ್ರ ಬಜೆಟ್ ಉಪನ್ಯಾಸ
ಮಂಗಳೂರು: ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ ವತಿಯಿಂದ ಸೋಮವಾರ ಸಂಜೆ 6ಕ್ಕೆ ಎಸ್‌ಡಿಎಂ ಕಾನೂನು ವಿದ್ಯಾಲಯ ಕಾಲೇಜಿನ ಸಭಾಂಗಣದಲ್ಲಿ 'ಕೇಂದ್ರ ಬಜೆಟ್' ಉಪನ್ಯಾಸ ನಡೆಯಲಿದೆ. ಉಡುಪಿ ವಾಣಿಜ್ಯ ಸಲಹೆಗಾರ ಜಯದೇವಪ್ರಸಾದ್ ಮೊಳೆಯಾರ ಬಜೆಟ್ ಬಗ್ಗೆ ಮಾಹಿತಿ ನೀಡುವರು. ಕರ್ಣಾಟಕ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ಡಾ. ಮೀರಾ ಅರಾನ್ಹಾ ಅಧ್ಯಕ್ಷತೆ ವಹಿಸುವರು ಎಂದು ಕೌನ್ಸಿಲ್ ಅಧ್ಯಕ್ಷ ಯು. ರಾಮ್‌ರಾವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇಂದೇ ಪಡಿತರ ಪಡೆಯಿರಿ
ಮಂಗಳೂರು: ಭಾರತ ಆಹಾರ ನಿಗಮದಲ್ಲಿ ಅಕ್ಕಿ ದಾಸ್ತಾನು ಲಭ್ಯವಿಲ್ಲದ ಕಾರಣ, ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಮಾಡಲಾದ ಆಹಾರ ಧಾನ್ಯಗಳನ್ನು ಜಿಲ್ಲೆಯ ನಗರ, ಗ್ರಾಮಾಂತರ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಿಂದ ಮಾ. 4ರವರೆಗೆ ಪಡೆಯಬಹುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

