ದಕ್ಷಿಣ ಕನ್ನಡ

ಜನದ್ರೋಹಿ ಬಿಜೆಪಿಯನ್ನು ತಿರಸ್ಕರಿಸಿ: ಪೂಜಾರಿ

Published On :

ಸುಳ್ಯ: ಬಿಜೆಪಿ ಆಡಳಿತದಲ್ಲಿ ಪೌರಾಡಳಿತವನ್ನು ಧ್ವಂಸ ಮಾಡುವ ಪ್ರಕ್ರಿಯೆ ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ತಮ್ಮ ದುರಾಡಳಿತದಿಂದ ಹೇಗೆ ಜನದ್ರೋಹ ಮಾಡುತ್ತಿದ್ದಾರೋ ಅದೇ ರೀತಿ ಇಲ್ಲೂ ಬಿಜೆಪಿಯವರು ಆಲೋಚಿಸುವ ಶಕ್ತಿಯನ್ನೇ ಕಳೆದುಕೊಂಡು ಜನದ್ರೋಹಿ ಆಡಳಿತ ನೀಡುತ್ತಿದ್ದಾರೆ. ಇಂತಹವರನ್ನು ಮುಂದಿನ ಚುನಾವಣೆಯಲ್ಲಿ ಜನ ತಿರಸ್ಕರಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭವಿಷ್ಯದಲ್ಲಿ ಕಾಂಗ್ರೆಸ್ ನೇತೃತ್ವದಲ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ. ಆಗ ಪೌರಾಡಳಿತಗಳಿಗೆ ಹೊಸ ಸ್ಪಂದನೆ ದೊರೆಯಲಿದೆ ಎಂದರಲ್ಲದೆ, ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಂತರಂಗದ ಅಲೆ ಹರಿಯುತ್ತಿದ್ದು ಕಾಂಗ್ರೆಸ್ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಅಧಿಕಾರ ಹಿಡಿಯುತ್ತದೆ ಎಂದು ಹೇಳಿದರು.
ಪಾದಯಾತ್ರೆ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಪೂರ್ವಭಾವಿಯಾಗಿ ಭಾನುವಾರ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಹಾಗೂ ಎ.ಐ.ಸಿ.ಸಿ ಕಾರ್ಯದರ್ಶಿ ವಿನಯಕುಮಾರ್ ಸೊರಕೆ ಸುಳ್ಯದಲ್ಲಿ  ಪಾದಯಾತ್ರೆ ನಡೆಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.