ಡೀವಿಯದ್ದು ಅಶಾಂತಿ ಸೃಷ್ಟಿಸುವ ಹುನ್ನಾರ; ಸೊರಕೆ
ಪುತ್ತೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಪುತ್ತೂರಿನಲ್ಲಿ 'ಗೂಂಡಾ ರಾಜಕಾರಣಿಗಳಿಗೆ ಅವಕಾಶ ನೀಡಿದರೆ ಕಣ್ಣೀರಿನಲ್ಲಿ ಕೈತೊಳೆಯಬೇಕಾದೀತು' ಎಂಬ ಹೇಳಿಕೆ ನೀಡುವ ಮೂಲಕ ಜನರ ವಿಚಾರಗಳನ್ನು ತಿರುಚಲು ಪ್ರಯತ್ನಿಸುತ್ತಿದ್ದಾರೆ ಹಾಗೂ ಅಶಾಂತಿ ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ವಿನಯ ಕುಮಾರ್ ಸೊರಕೆ ಆರೋಪಿಸಿದ್ದಾರೆ.
ಅವರು ಶುಕ್ರವಾರ ಪತ್ರಿಕಾ ಭವನದಲ್ಲಿ ಕಾಂಗ್ರೆಸ್ನ ಪುರಸಭಾ ಪ್ರಣಾಳಿಕೆ ಬಿಡುಗಡೆಗೊಳಿಸಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಲ್ಲಿನವರೇ ಆಗಿರುವ ಡಿ.ವಿ. ಸದಾನಂದ ಗೌಡರು ತನ್ನ ಅಸಮರ್ಥತೆ ಮರೆ ಮಾಚಲು ಗೂಂಡಾಗಿರಿ, ಜನರ ಕಣ್ಣೀರು ಮುಂತಾದ ಹೇಳಿಕೆ ನೀಡಿ ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಶನಿಪೂಜೆ ನಡೆಸಿದವರ ಮೇಲೆ ಕೇಸು ಹಾಕಿಸಿರುವುದೇ ಅವರ ದೊಡ್ಡ ಸಾಧನೆ ಎಂದು ವ್ಯಂಗ್ಯವಾಡಿದರು.
ಜಿಲ್ಲಾ ಕೇಂದ್ರ ಪ್ರಯತ್ನ: ಕಾಂಗ್ರೆಸ್ ಪಕ್ಷ ಪುರಸಭೆಯಲ್ಲಿ ಆಡಳಿತಕ್ಕೆ ಬಂದಲ್ಲಿ ಪುತ್ತೂರು ಪುರಸಭೆಯನ್ನು ನಗರ ಸಭೆಯನ್ನಾಗಿ ಪರಿವರ್ತಿಸುವ ಬಗ್ಗೆ ಹಾಗೂ ಪುತ್ತೂರನ್ನು ಜಿಲ್ಲಾ ಕೇಂದ್ರವಾಗಿ ಮಾರ್ಪಡಿಸುವ ನಿಟ್ಟಿನಲ್ಲಿ ತಯಾರಿ ನಡೆಸಲಾಗುವುದು ಎಂದರು.
ಜೆಡಿಎಸ್ನಲ್ಲಿ ಗುರುತಿಸಿಕೊಂಡಿದ್ದ ಸತೀಶ್ ರೈ ನಡುಬೈಲು ಕಾಂಗ್ರೆಸ್ಗೆ ಸೆರ್ಪಡೆಯಾಗಿದ್ದು ಕೆಪಿಸಿಸಿ ಸದಸ್ಯ ವಿನಯಕುಮಾರ್ ಸೊರಕೆ ಪುತ್ತೂರಿನ ಪತ್ರಿಕಾಭವನದಲ್ಲಿ ಸತೀಶ್ ಅವರಿಗೆ ಪಕ್ಷದ ಪ್ರಣಾಳಿಕೆ ನೀಡುವ ಮೂಲಕ ಕಾಂಗ್ರೆಸ್ಗೆ ಬರಮಾಡಿಕೊಂಡರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ತಾನು ಆಕಾಂಕ್ಷಿಯಾಗಿದ್ದೆ. ಹಿರಿಯರಾದ ಜನಾರ್ದನ ಪೂಜಾರಿಗೆ ಅವಕಾಶವಾದ ಹಿನ್ನಲೆಯಲ್ಲಿ ತನಗೆ ಸಿಗಲಿಲ್ಲ ಎಂದ ಅವರು, ಈ ಬಾರಿಯೂ ತನಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

