ಸಂಚಯಗಿರಿ: ಚುನಾವಣಾ ಬಹಿಷ್ಕಾರ ಅಪಸ್ವರ
ಬಂಟ್ವಾಳ: ಪುರಸಭಾ ಚುನಾವಣೆಗೆ ದಿನ ಹತ್ತಿರವಾಗುತ್ತಿರುವಂತೆಯೇ, ವಿವಿಧ ಪಕ್ಷಗಳಿಂದ ಚುನಾವಣಾ ಪ್ರಚಾರ ಕಾರ್ಯವೂ ಬಿರುಸಿನಿಂದ ನಡೆಯುತ್ತಿದೆ. ಈ ನಡುವೆ ಬಂಟ್ವಾಳ ಸಂಚಯಗಿರಿ ವಾರ್ಡ್ನಲ್ಲಿ ಚುನಾವಣೆ ಬಹಿಷ್ಕಾರದ ಅಪಸ್ವರ ಹೊರಟಿರುವುದು ರಾಜಕೀಯ ಪಕ್ಷಗಳಿಗೆ ತಲೆನೋವು ಉಂಟುಮಾಡಿದೆ.
ಬಂಟ್ವಾಳ ಪುರಸಭಾ ವ್ಯಾಪ್ತಿ ವಾರ್ಡ್ ಸಂಖ್ಯೆ 11ರ ಸಂಚಯಗಿರಿಯಲ್ಲಿ ಚುನಾವಣೆ ಬಹಿಷ್ಕಾರದ ಬ್ಯಾನರ್ ಹಾಕಲಾಗಿದ್ದು, 'ಯುವ ರಾಜಕಾರಣಿಗಳೇ, ಈ ರಸ್ತೆಯಲ್ಲಿ ನೀವು ಯಾರಲ್ಲಿಯೂ ಮತ ಯಾಚಿಸಬಾರದು . ಆತ್ಮೀಯ ಮತದಾರರೇ ಈ ರಸ್ತೆಯ ಅಕ್ಕಪಕ್ಕದಲ್ಲಿರುವ ತಾವುಗಳು ಈ ಬಾರಿಯ ಪುರಸಭಾ ಚುನಾವಣೆಯಲ್ಲಿ ಭಾಗವಹಿಸಬಾರದಾಗಿ ವಿನಂತಿಸಿಕೊಳ್ಳುತ್ತೇವೆ-ಎಂ.ಆರ್.ಕಂಪೌಂಡ್ ನಾಗರಿಕರು' ಎಂದು ಉಲ್ಲೇಖಿಸಲಾಗಿದೆ.
ಮತದಾರರು ಬಹಿರಂಗವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವುದು ಈ ಅಭ್ಯರ್ಥಿಗಳ ನಿದ್ದೆಗೆಡಿಸಿದೆ.
ಪುತ್ತೂರು: ಪುತ್ತೂರು ಪುರಸಭಾ ಚುನಾವಣಾ ಜೆಡಿಎಸ್ ಪ್ರಣಾಳಿಕೆಯನ್ನು ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ವಿಟ್ಲ ಮಹಮ್ಮದ್ ಕುಂಞ ಅಧ್ಯಕ್ಷತೆಯಲ್ಲಿ ಬಿಡುಗಡೆಗೊಳಿಸಲಾಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಾಧ್ಯಕ್ಷ ಇಬ್ರಾಹಿಂ ಗೋಳಿಕಟ್ಟೆ ಮಾತನಾಡಿದರು. ಜೆಡಿಎಸ್ ಮುಖಂಡರಾದ ಜಾಕೆ ಮಾಧವ ಗೌಡ ಸುಳ್ಯ, ಸೇಸಪ್ಪಗೌಡ ಮಾಡತ್ತಾರು ಇತರರು ಇದ್ದರು.
ರೆಹನಾ ಜೆಡಿಎಸ್ ಸೇರ್ಪಡೆ
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಬಜಾಲ್-ಫೈಸಲ್ನಗರ ವಾರ್ಡಿನ ಕಾಂಗ್ರೆಸ್ ಕಾರ್ಯಕರ್ತೆ ರೆಹನಾ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಪಕ್ಷದ ರಾಜ್ಯ ಉಪಾಧ್ಯಕ್ಷ ನಾಗರಾಜ್ ಶೆಟ್ಟಿ ಜೆಡಿಎಸ್ ಧ್ವಜ ನೀಡಿ ಪಾಲಿಕೆಯ 53ನೇ ಬಜಾಲ್ ವಾರ್ಡಿನ ಅಭ್ಯರ್ಥಿಯಾಗಿ ಆಯ್ಕೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

