ಇಂದಿನಿಂದ ಜಯಶ್ರೀ ಶರ್ಮ ಚಿತ್ರಕಲಾ ಪ್ರದರ್ಶನ
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ, ಕಲಾವಿದೆ ಜಯಶ್ರೀ ಶರ್ಮ ಕದ್ರಿ ಇವರ ಸೃಜನಾ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ 5ರಿಂದ 7ರವರೆಗೆ ವಿದ್ಯಾಗಿರಿಯ ಆಳ್ವಾಸ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಮಾ. 5 ರಂದು ಸಂಜೆ 3.30ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಇವರು ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯರಾದ ಪುರುಷೋತ್ತಮ ಅಡ್ವೆ ಭಾಗವಹಿಸಲಿದ್ದಾರೆ. ಪ್ರಸಾದ್ ಆರ್ಟ್ ಗ್ಯಾಲರಿಯ ನಿರ್ದೇಶಕ ಕೋಟಿ ಪ್ರಸಾದ್ ಆಳ್ವ, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಕುರಿಯನ್ ಉಪಸ್ಥಿತರಿರುವರು.
ಕರಾವಳಿ ಚಿತ್ರಕಲಾ ಚಾವಡಿ, ಮಂಗಳೂರು, ಆಳ್ವಾಸ್ ಕಾಲೇಜಿನ ಬಿ.ವಿ.ಎ ವಿಭಾಗ ಹಾಗೂ ಆಳ್ವಾಸ್ ಕನ್ನಡ ಸಂಸ್ಕೃತಿ ಕೇಂದ್ರದ ಸಹಕಾರದೊಂದಿಗೆ ಈ ಪ್ರದರ್ಶನ ನಡೆಯಲಿದೆ.
ಮೂಲತಃ ಪುತ್ತೂರು ತಾಲೂಕಿನ ಕಡಬದವರಾದ ಇವರು ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮತ್ತು ಪುತ್ತೂರು ಫಿಲೋಮಿನಾ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿದ್ದಾರೆ. ಈ ಮೊದಲು ಭಾವನಾ ಎಂಬ ಚಿತ್ರಕಲಾ ಪ್ರದರ್ಶನವನ್ನು ಮಾಡಿದ್ದಾರೆ. ಗ್ರಾಮೀಣ ಸಂವೇದನೆ, ಪ್ರಕೃತಿ, ಹೆಣ್ಣಿನ ಸೂಕ್ಷ್ಮ ಸಂವೇದನೆ, ಸಾಂಪ್ರದಾಯಿಕ ಕಲೆಯ ಆಶಯಗಳನ್ನು ಹೊಂದಿರುವ ಹಲವು ಚಿತ್ರಗಳನ್ನು ಇವರು ರಚಿಸಿದ್ದಾರೆ. ಪರಂಪರೆ, ಯಾರೀ ಮುಗುದೆ, ಹೂ ಮಾರುವ ಹುಡುಗಿ, ಬದುಕಿನ ಆಟ, ಇಂಚರ, ನಿರೀಕ್ಷೆ ಮೊದಲಾದ ಇವರ ಕೌಶಲ್ಯಪೂರ್ಣ ಚಿತ್ರಗಳು ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

