ದಕ್ಷಿಣ ಕನ್ನಡ

ಯುವಶಕ್ತಿಯಲ್ಲಿ ತುಳು ಭಾಷೆ ಜಾಗೃತಿ ಮೂಡಲಿ: ಕೆ. ಚಿನ್ನಪ್ಪ ಗೌಡ

Published On :

ಮೂಡುಬಿದಿರೆ: ತುಳುಭಾಷೆ ಜಗತ್ತಿನ ಯಾವ ಭಾಷೆಗೂ ಕಡಿಮೆ ಇಲ್ಲ. ವಿದೇಶಿ ವಿದ್ವಾಂಸರೇ ತುಳುವನ್ನು ಹುಡುಕಿಕೊಂಡು ಬರುವಷ್ಟು ತುಳುವಿನಲ್ಲಿ ಅರಿವಿನ ಆಸ್ತಿ ಇದೆ. ಇದನ್ನು ಅರ್ಥಮಾಡಿಕೊಂಡು ಯುವಶಕ್ತಿ ತುಳು ಭಾಷಾಭಿಮಾನವನ್ನೂ ಅಧ್ಯಯನಾಸಕ್ತಿಯನ್ನು ಹೊಂದಬೇಕು ಎಂದು ತುಳು ವಿದ್ವಾಂಸರಾದ ಡಾ. ಚಿನ್ನಪ್ಪ ಗೌಡ ಹೇಳಿದರು.
ಅವರು ಸೋಮವಾರ ಸಂಜೆ ವಿದ್ಯಾಗಿರಿಯ ವಿಶ್ವನುಡಿಸಿರಿ ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಉದಿಪನ ಮತ್ತು ತುಳುಸಿರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮಾನಾಥ ಕೋಟ್ಯಾನ್ ತುಳು ಭಾಷೆ ಶೀಘ್ರವಾಗಿ ಸಂವಿಧಾನದ 8ನೇ ಪರಿಚ್ಛೇದದಲ್ಲಿ  ಸೇರುವಂತಾಗಲಿ ಎಂದರು.
ಡಾ.ಗಣನಾಥ ಎಕ್ಕಾರು ಮಾತನಾಡಿ, ತುಳುವಿಗೆ ಶ್ರೀಮಂತ ಸಾಹಿತ್ಯ ಪರಂಪರೆಯಿದೆ. ಅಂತೆಯೇ ಸಮೃದ್ಧ ಜಾನಪದ ಸಂಪತ್ತೂ ಇದೆ. ಅದರ ಅಧ್ಯಯನದ ಮೂಲಕ ಜಗತ್ತಿಗೆ ತುಳುವಿನ ಮಹತ್ವ ತಿಳಿಸಬೇಕಿದೆ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ. ಮೋಹನ ಆಳ್ವ ಅವರು ತುಳು ಅಧ್ಯಯನ ಕೇಂದ್ರದ ಮೂಲಕ ಮುಂದೆ ತುಳು ಸಂಶೋಧನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿ ಎಂದು ಹೇಳಿದರು. ಚಂದ್ರಶೇಖರ ಗೌಡ ಸ್ವಾಗತಿಸಿದರು. ಡಾ. ಯೋಗೀಶ್ ಕೈರೋಡಿ ನಿರೂಪಿಸಿದರು. ಡಾ. ಧನಂಜಯ ಕುಂಬ್ಳೆ ವಂದಿಸಿದರು.
---
ಕಾವೂರು ಬಸ್ ಆರಂಭಕ್ಕೆ ಆಗ್ರಹ
ಮಂಗಳೂರು: ಕಾವೂರಿನಿಂದ ಬಜ್ಪೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸಂಚಾರವನ್ನು ಪುನರಾರಂಭಿಸುವಂತೆ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಆಗ್ರಹಿಸಿದೆ. ಬಸ್ ರದ್ದುಪಡಿಸಿದರ ಪರಿಣಾಮ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.