ದಕ್ಷಿಣ ಕನ್ನಡ

ಬಂಟ್ವಾಳ ಪುರಸಭೆ: ಪ್ರಣಾಳಿಕೆ ಬಿಡುಗಡೆ

Published On :

ಬಂಟ್ವಾಳ: ಇಲ್ಲಿನ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವುದರ ಮೂಲಕ ಮುಂದಿನ ಅವಧಿಯಲ್ಲಿ ಅಧಿಕಾರದ ಗದ್ದುಗೆ ಏರಲಿದೆ ಎಂದು ಬಂಟ್ವಾಳ ಶಾಸಕ ಬಿ. ರಮಾನಾಥ ರೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿ.ಸಿ. ರೋಡ್‌ನಲ್ಲಿ ಇತ್ತೀಚೆಗೆ ಪುರಸಭಾ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಹಾಗೂ ಪ್ರಣಾಳಿಕೆ ಬಿಡುಗಡೆಗೊಳಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ತನ್ನ ಶಾಸಕತ್ವದ ಹಾಗೂ ಕಾಂಗ್ರೆಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ಅನುಷ್ಠಾನಗೊಂಡ ಕಿರು ನೀರಾವರಿ ಯೋಜನೆ ಬಿಟ್ಟರೆ ಬಿಜೆಪಿ ಆಡಳಿತಾವಧಿಯಲ್ಲಿ ಯಾವುದೇ ನೀರಾವರಿ ಯೋಜನೆ ಕಾರ್ಯಗತಗೊಂಡಿಲ್ಲ. ಬಿಜೆಪಿಗರು ಹೇಳುವಂತೆ ಹಾಗೇನಾದರೂ ಆಗಿರುವ ಕಾರ್ಯಯೋಜನೆಯ ಬಗ್ಗೆ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಸವಾಲೆಸೆದರು.
ವಂಚಕರಿಗೆ ಪಾಠ ಕಲಿಸುತ್ತಾರೆ..: ಕಳೆದ ಪುರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದುಕೊಂಡಿತ್ತಾದರೂ, ಕೆಲ ಕಾಂಗ್ರೆಸ್ ಸದಸ್ಯರು ಪಕ್ಷಾಂತರ ಮಾಡಿದ್ದರಿಂದ ಅಧಿಕಾರ ಬಿಜೆಪಿ ಪಾಲಾಯಿತಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ರೈ, ಪಕ್ಷಕ್ಕೆ ದ್ರೋಹ ಬಗೆಯುವ ಮೂಲಕ, ಮತ ನೀಡಿದ ಮತದಾರರಿಗೂ ಅಂತಹ ಜನಪ್ರತಿನಿಧಿಗಳಿಂದ ತೊಂದರೆಯಾಗಿದೆ. ಅಂತಹ ವಂಚಕರಿಗೆ ಹಾಗೂ ಅಧಿಕಾರದ ಆಸೆಯಿಂದ ಸದಸ್ಯರನ್ನು ದುಡ್ಡುಕೊಟ್ಟು ಕೊಂಡವರಿಗೂ ಈ ಬಾರಿಯ ಚುನಾವಣೆಯಲ್ಲಿ ಮತದಾರರು ಸರಿಯಾದ ಪಾಠ ಕಲಿಸುತ್ತಾರೆ ಎಂದು ಹೇಳಿದರು.
ಲವ್ ಜಿಹಾದ್‌ಗೆ ಜಯಂತಿ ಖಂಡನೆ
ಪುತ್ತೂರು: ಜಿಲ್ಲೆಯಲ್ಲಿ ಅದರಲ್ಲೂ ಪುತ್ತೂರು ತಾಲೂಕಿನಲ್ಲಿ ಮಹಿಳೆಯರು ಕಾಣೆಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಇಂತಹ ಪ್ರಕರಣಗಳಲ್ಲಿ ವಿಶೇಷವಾಗಿ ಹಿಂದೂ ಅವಿವಾಹಿತ ಹುಡುಗಿಯರನ್ನು ಕೇಂದ್ರೀಕರಿಸಿ ನಡೆಯುತ್ತಿರುವುದು ಉಲ್ಲೇಖಾರ್ಹ.  ಲವ್ ಜಿಹಾದ್ ಹೆಸರಿನಲ್ಲಿ ಮೋಸ ವಂಚನೆಗಳಿಂದ ಮತಾಂತರ ನಡೆಸುವ ಪ್ರಯತ್ನ ಖಂಡನೀಯ ಎಂದು ಮಹಿಳಾ ಮೋರ್ಚಾದ ಸಹಸಂಚಾಲಕಿ ಜಯಂತಿ ನಾಯಕ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡಹೆಣ್ಣು ಮಕ್ಕಳಿಗೆ ಹಣದ ಆಮಿಷ ಒಡ್ಡಿ ಮತಾಂತರದ ಹೆಸರಿನಲ್ಲಿ ಮದುವೆಯಾಗುತ್ತೇನೆ ಎಂದು ನಂಬಿಸಿ ಕೇರಳಕ್ಕೆ ಕರೆದುಕೊಂಡು ಹೋಗುತ್ತಾರೆ. ಇತ್ತೀಚೆಗೆ ನಡೆದ ಘಟನೆಯಲ್ಲಿ ಸಕಾಲಿಕ ಕಾರ್ಯಾಚರಣೆಯನ್ನು ಈ ಸಂದರ್ಭ ಶ್ಲಾಘಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.