ದಕ್ಷಿಣ ಕನ್ನಡ

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

Published On :

ಬಂಟ್ವಾಳ: ಪುರಸಭಾ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದು ಆಂತಕದ ಪರಿಸ್ಥಿತಿ ನಿರ್ಮಾಣವಾದ ಘಟನೆ ಸೋಮವಾರ ವಾರ್ಡ್ 22ರ ಬೊಂಡಾಲದಲ್ಲಿ ನಡೆದಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಗೊಂದಲ ಮೂಡಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ವಾರ್ಡ್ ಸಂಖ್ಯೆ 22ರಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು ಇದರಲ್ಲಿ ಪುರಸಭಾ ವ್ಯಾಪ್ತಿಗೆ ಒಳಪಡದ ಸ್ಥಳೀಯ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರು ಇದ್ದರೆನ್ನಲಾಗಿದೆ. ಇದನ್ನು ಆಕ್ಷೇಪಿಸಿದ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸದಂತೆ ತಡೆಯೊಡ್ಡಿದ್ದರು. ಬಳಿಕ ಇದೇ ಸ್ಥಳಕ್ಕೆ ಶಾಸಕ ರಮಾನಾಥ ರೈ ಆಗಮಿಸಿದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸದಂತೆ ತಡೆಯೊಡ್ಡಲು ಮುಂದಾದಾಗ ಎರಡೂ ಗುಂಪಿನ ಮಧ್ಯೆ ಮಾತಿನ ಚಕಮಕಿ ನಡೆದು ಘರ್ಷಣೆಯವರಗೂ ಮುಂದುವರಿಯಿತು.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬಂಟ್ವಾಳ ನಗರ ಪೊಲೀಸರು ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ಸ್ಥಳದಲ್ಲಿ ನಿಯೋಜಿಸಿ ಘರ್ಷಣೆ ನಡೆಯದಂತೆ ಮುನ್ನೆಚರಿಕೆ ವಹಿಸಿದ್ದಾರೆ. ಇದೇ ರೀತಿ ಪುರಸಭಾ ವ್ಯಾಪ್ತಿಯ ವಿವಿಧೆಡೆಗಳಲಿ ಪ್ರಚಾರದ ಸಂದರ್ಭ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಬಗ್ಗೆ ವರದಿಯಾಗಿದೆ. ಜಕ್ರಿಬೆಟ್ಟು ಹಾಗೂ ತಾಳಿಪಡ್ಪು ಬಳಿ ಪುರಸಭೆ ವ್ಯಾಪ್ತಿಗೆ ಸಂಬಂಧಪಡದ ವ್ಯಕ್ತಿಗಳು ಪ್ರಚಾರದಲ್ಲಿ ತೊಡಗಿದ್ದಾರೆ ಎಂಬ ಕಾರಣಕ್ಕೆ ವಾಗ್ಯದ್ಧ ನಡೆದಿರುವುದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.