ನಾಳೆ ಸಾರ್ವತ್ರಿಕ ರಜೆ
ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆ ಮತದಾನ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಮಾ.6ರ ಬೆಳಗ್ಗೆ 6ರಿಂದ 7ರ ಮಧ್ಯರಾತ್ರಿ ವರೆಗೆ, ಮತ ಎಣಿಕೆ ದಿನ ಮಾ.11ರಂದು ಬೆಳಗ್ಗೆ 6ರಿಂದ ರಾತ್ರಿ 8ರ ವರೆಗೆ ಮದ್ಯಮುಕ್ತ ದಿನ ಎಂದು ಘೋಷಿಸಲಾಗಿದೆ.
ಈ ಅವಧಿಯಲ್ಲಿ ಜಿಲ್ಲೆಯ ಯಾವುದೇ ಹೊಟೇಲ್, ನಾನ್ ಪ್ರೊಪ್ರೈಟರಿ ಕ್ಲಬ್, ಸ್ಟಾರ್ ಹೊಟೇಲ್, ಕ್ಲಬ್ಗಳಲ್ಲಿ ಮದ್ಯಮಾರಾಟ ಅಥವಾ ಪೂರೈಕೆಯನ್ನು ನಿಷೇಧಿಸಲಾಗಿದೆ. ಇದು ಸ್ಥಳೀಯ ಸಂಸ್ಥೆ ಚುನಾವಣೆ ನಡೆಯುವ ಮಂಗಳೂರು ಮಹಾನಗರ ಪಾಲಿಕೆ, ಮೂಡುಬಿದಿರೆ ಪುರಸಭೆ, ಉಳ್ಳಾಲ, ಬಂಟ್ವಾಳ, ಪುತ್ತೂರು ಮತ್ತು ಪಟ್ಟಣ ಪಂಚಾಯ್ತಿ ಬೆಳ್ತಂಗಡಿ ಮತ್ತು ಸುಳ್ಯ ಪ್ರದೇಶಕ್ಕೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ನಾಳೆ ಸಾರ್ವತ್ರಿಕ ರಜೆ: ಮಾ.7ರಂದು ಸ್ಥಳೀಯ ಸಂಸ್ಥೆ ಮತದಾನ ಹಿನ್ನಲೆಯಲ್ಲಿ ಆಯಾ ಮತ ಕ್ಷೇತ್ರಗಳ ಎಲ್ಲ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನ ಶಿಕ್ಷಣ ಸಂಸ್ಥೆ ಸೇರಿ)ಆಯಾ ಚುನಾವಣಾ ಕ್ಷೇತ್ರಗಳಲ್ಲಿ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿದೆ. ರಜೆ ತುರ್ತು ಸೇವೆಗೆ ಅನ್ವಯಿಸುವುದಿಲ್ಲ. ಚುನಾವಣಾ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.
ಕಾರ್ಮಿಕರಿಗೆ ವೇತನ ರಜೆ: ಮಾ.7ರಂದು ಮತದಾನ ಚಲಾಯಿಸಲು ಅನುಕೂಲವಾಗಲು ಎಲ್ಲ ಕಾರ್ಖಾನೆ, ಕೈಗಾರಿಕಾ ಸಂಸ್ಥೆ ಮತ್ತು ವಾಣಿಜ್ಯ ಸಂಸ್ಥೆಗಳು, ಇತರೆ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ವೇತನ ಸಹಿತ ಅನುಮತಿ ನೀಡುವಂತೆ ಮಾಲೀಕರು/ನಿಯೋಜಕರಿಗೆ ಕಾರ್ಮಿಕ ಆಯುಕ್ತರು ಸೂಚಿಸಿದ್ದಾರೆ.
ಮತದಾನಕ್ಕೆ ದಾಖಲೆ ಜತೆಗಿರಲಿ: ಮಾ.7ರಂದು ನಡೆಯುವ ಸ್ಥಳೀಯ ಸಂಸ್ಥೆಗಳ ಮತದಾನದಲ್ಲಿ ಮತದಾನ ಮಾಡಬೇಕಾದರೆ ಮತದಾರರ ಭಾವಚಿತ್ರದ ಗುರುತಿನ ಚೀಟಿ ಅಥವಾ ಮತದಾರರು ಕುಟುಂಬದ ಮುಖ್ಯಸ್ಥರ ಹೆಸರಲ್ಲಿ ನೀಡುವ 21 ದಾಖಲೆಗಳ ಪೈಕಿ ಯಾವುದಾದರೂ ಒಂದನ್ನು ಕುಟುಂಬದ ಇನ್ನಿತರ ಸದಸ್ಯರು ಬಳಸಬಹುದು ಎಂದು ಆಯೋಗದ ಪ್ರಕಟಣೆ ತಿಳಿಸಿದೆ.
ನಾಳೆ ಆಧಾರ್ ನೋಂದಣಿ ರಜೆ
ಆಧಾರ್ ದ್ವಿತೀಯ ಹಂತದ ನೋಂದಣಿ ಮಂಗಳೂರು ಮತ್ತು ಬಂಟ್ವಾಳದ ಒಟ್ಟು 11 ಕೇಂದ್ರಗಳಲ್ಲಿ ನಡೆಯುತ್ತಿದ್ದು, ಮಾ.7ರಂದು ಸ್ಥಳೀಯ ಸಂಸ್ಥೆ ಚುನಾವಣೆಗೆ ಹಿನ್ನಲೆಯಲ್ಲಿ ಆ ದಿನ ಆಧಾರ್ ಕೇಂದ್ರ ಕಾರ್ಯನಿರ್ವಹಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

