ದಕ್ಷಿಣ ಕನ್ನಡ

ಮತಾಂತರ ಘಟನೆ ಮುಂದುವರಿದರೆ ಉಗ್ರ ಪ್ರತಿಭಟನೆ: ಎಸ್‌ಟಿ ಮೋರ್ಚಾ

Published On :

ಪುತ್ತೂರು: ಅಮಾಯಕ ಬಡ ಯುವತಿ- ಮಹಿಳೆಯರನ್ನು ಲೈಂಗಿಕವಾಗಿ ಶೋಷಣೆ ಮಾಡುವುದಲ್ಲದೆ ವಿದೇಶಕ್ಕೆ ಮಾರಾಟ ಮಾಡುವ ಉದ್ದೇಶವಿಟ್ಟುಕೊಂಡು ಮತಾಂತರಗೊಳಿಸುವ ಜಾಲದ ದುಷ್ಟ ಶಕ್ತಿಗಳಿಗೆ ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕಾರ ನೀಡುತ್ತಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪುತ್ತೂರು ಮಂಡಲ ಬಿಜೆಪಿ ಎಸ್‌ಟಿ ಮೋರ್ಚಾದ ಅಧ್ಯಕ್ಷ ಕೊರಗಪ್ಪ ನೈಕ್ ಆಗ್ರಹಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ವರ್ಗಕ್ಕೆ ಸೇರಿದ ಅಂಕತ್ತಡ್ಕದ ಬಡ ಕುಟುಂಬದ ಯುವತಿಯೊಬ್ಬಳನ್ನು ಹಣದ ಆಮಿಷವೊಡ್ಡಿ ಪ್ರೀತಿ- ಪ್ರೇಮದ ನಾಟಕವಾಡಿ ಮರುಳುಗೊಳಿಸಿ ಮತಾಂತರಕ್ಕೆ ಗುರಿಯಾಗಿಸಿರುವುದನ್ನು ನಾವು ವಿರೋಧಿಸುತ್ತೇವೆ. ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಬೀದಿಗಿಳಿದು ಉಗ್ರ ಪ್ರತಿಭಟನೆ ನಡೆಸುವಲ್ಲಿ ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು.
ಧರ್ಮದ ಮುಖವಾಡ ಧರಿಸಿಕೊಂಡು ಹಣದ ಅಮಿಷವೊಡ್ಡಿ ಹಿಂದೂ ಯುವತಿಯೊಬ್ಬಳನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲೆಂದು ಪೊನ್ನಾಣಿಗೆ ಕರೆದೊಯ್ದ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಇದರ ಜೊತೆಗೆ ಕಾಣೆಯಾಗಿರುವ ಎಲ್ಲಾ ಯುವತಿಯರ ನಾಪತ್ತೆ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಬೇಕು ಎಂದು ಒತ್ತಾಯಿಸಿದರು. ಪುತ್ತೂರು ಮಂಡಲ ಬಿಜೆಪಿ ಅಲ್ಪಸಂಖ್ಯಾತ  ಮೋರ್ಚಾದ ಅಧ್ಯಕ್ಷ ಅಬ್ದುಲ್ ಕುಂಞ ಮಾತನಾಡಿದರು. ಪುತ್ತೂರು ಮಂಡಲ ಬಿಜೆಪಿ ಎಸ್‌ಟಿ ಮೋರ್ಚಾದ ಕಾರ್ಯದರ್ಶಿ ಅಶೋಕ್ ಕುಮಾರ್ ಬಲ್ನಾಡು, ಜಿಲ್ಲಾ ಬಿಜೆಪಿ ಎಸ್‌ಟಿ ಮೋರ್ಚಾದ ಸದಸ್ಯ ಪೂವಪ್ಪ ನಾಯ್ಕ, ಸದಸ್ಯ ಧನಂಜಯ್ ನಾಯ್ಕ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.