ದಕ್ಷಿಣ ಕನ್ನಡ

ನಾಳೆ 'ರಾಜ್ಯಮಟ್ಟದ ಮಹಿಳಾ ಸಮಾವೇಶ'

Published On :

ಮಂಗಳೂರು: ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ ಹಾಗೂ ಮಹಿಳಾ ಸಂಘಗಳ ಜಾಲ ವತಿಯಿಂದ ಮಾ. 6 ರಿಂದ 8ರವರೆಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಜಾಗೃತಿ ಕಾರ್ಯಕ್ರಮ ನಡೆಯಲಿದೆ.
ಮಾ. 6 ರಂದು ಮಧ್ಯಾಹ್ನ 2ಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಹಳೆಯ ಸೆನೆಟ್ ಸಭಾಂಗಣದಲ್ಲಿ ಮಹಿಳಾ ಕೇಂದ್ರಿತ ಚಲನಚಿತ್ರ ಪ್ರದರ್ಶನ ನಡೆಯಲಿದೆ. ಸಂಜೆ 4.30 ರಿಂದ 6.30ರ ತನಕ ಹಂಪನಕಟ್ಟೆ ಸರ್ಕಲ್‌ನಿಂದ ವಿಶ್ವವಿದ್ಯಾಲಯ ಕಾಲೇಜಿನವರೆಗೆ ಕಪ್ಪುಡುಗೆ ಧರಿಸಿ, ಮೊಂಬತ್ತಿ ಉರಿಸಿ ಮಾನವ ಸರಪಳಿ ರಚಿಸಲಾಗುವುದು ಎಂದು ಕರಾವಳಿ ವಾಚಕ ವಾಚಕಿಯರ ಸಂಘದ ಮಾಜಿ ಅಧ್ಯಕ್ಷೆ ಚಂದ್ರಕಲಾ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮಾ. 7 ರಂದು ಬೆಳಗ್ಗೆ 10ಕ್ಕೆ ಮಹಿಳಾ ಅಧ್ಯಯನ ಕೇಂದ್ರದ ವತಿಯಿಂದ 'ಮಹಿಳೆಯರ ಮೇಲಿನ ದೌರ್ಜನ್ಯಗಳು: ಕಾರಣಗಳು ವಿಭಿನ್ನ ಆಯಾಮಗಳು' ವಿಷಯದ ಕುರಿತು ಮಂಗಳೂರು ವಿಶ್ವವಿದ್ಯಾಲಯದ ಹಳೆಯ ಸೆನೆಟ್ ಸಭಾಂಗಣದಲ್ಲಿ ನಡೆಯಲಿದೆ. ಮರಾಠಿ ಲೇಖಕಿ ಊರ್ಮಿಳಾ ಪವಾರ್ ಉದ್ಘಾಟಿಸುವರು.
ರಾಜ್ಯಮಟ್ಟದ ಮಹಿಳಾ ಸಮಾವೇಶ: ಮಾ. 8ರಂದು ಮಹಿಳಾ ದೌರ್ಜನ್ಯ ಹಾಗೂ ಭದ್ರತೆಯ ದೃಷ್ಠಿಯಿಂದ ಕರಾವಳಿ ಉತ್ಸವ ಮೈದಾನದಲ್ಲಿ 'ರಾಜ್ಯಮಟ್ಟದ ಮಹಿಳಾ ಸಮಾವೇಶ' ನಡೆಯಲಿದೆ. ಸಮಾವೇಶವನ್ನು ರಾಜಾಸ್ಥಾನದ ವಿಶಾಖ ಗೈಡ್‌ಲೈನ್ಸ್ ಕಾರಣಕರ್ತೆ ಬಾಂವ್ರಿದೇವಿ ಉದ್ಘಾಟಿಸುವರು. ಲೇಖಕಿ ವೈದೇಹಿ ಅಧ್ಯಕ್ಷತೆ ವಹಿಸುವರು ದೌರ್ಜನ್ಯ ವಿರೋಧಿ ವೇದಿಕೆಯ ಮರ್ಲಿನ್ ಮಾರ್ಟಿಸ್ ಹೇಳಿದರು. ಇದರಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 120 ಮಹಿಳಾ ಸಂಘಟನೆಗಳು ಪಾಲ್ಗೊಳ್ಳಲಿದೆ ಎಂದರು. ಜಿಲ್ಲೆಯಲ್ಲಿ ಅತ್ಯಾಚಾರ, ಯುವತಿಯರ ನಾಪತ್ತೆ ಪ್ರಕರಣಗಳು ಹೆಚ್ಚು ನಡೆಯುತ್ತಿದೆ.
ಮಂಗಳೂರಿನಲ್ಲಿ ಸಾರ್ವಜನಿಕವಾಗಿ ಮಹಿಳೆಯರು ಬದುಕು ಸಾಗಿಸುವುದು ದುಸ್ತರವಾಗಿದೆ. ಅಲ್ಲದೆ ವಿದ್ಯಾರ್ಥಿಗಳು ಒಂಟಿಯಾಗಿ ವಾಸುತ್ತಿರುವ ಸಂದರ್ಭದಲ್ಲಿ ಸೂಕ್ತ ರಕ್ಷಣೆಯ ಅಗತ್ಯವಿದೆ. ಈ ಉದ್ದೇಶಕ್ಕಾಗಿ ಮಹಿಳಾ ಸಮಾವೇಶ ನಡೆಸಲಾಗುತ್ತಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.