ದಕ್ಷಿಣ ಕನ್ನಡ

3 ಸಾವಿರ ಸಿಬ್ಬಂದಿ, ಬಿಗು ಭದ್ರತೆ

Published On :

ಮಂಗಳೂರು: ಪ್ರತಿ ಮತಗಟ್ಟೆಗೆ ಒಬ್ಬ ಅಧ್ಯಕ್ಷಾಧಿಕಾರಿ ಮತ್ತು 3 ಮಂದಿ ಮತಗಟ್ಟೆ ಅಧಿಕಾರಿ ಹಾಗೂ ಒಬ್ಬ ಗ್ರೂಪ್ ಡಿ ಸಿಬ್ಬಂದಿ ನಿಯೋಜಿಸಲಾಗಿದ್ದು, ಒಟ್ಟು 3 ಸಾವಿರ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಾಶ್ ಹೇಳಿದರು.
ಜಿಲ್ಲೆಯಲ್ಲಿ 70 ಸೂಕ್ಷ್ಮ, 84 ಅತಿ ಸೂಕ್ಷ್ಮ ಮತಗಟ್ಟೆಗಳಿವೆ. ಪಾಲಿಕೆ ವ್ಯಾಪ್ತಿಯಲ್ಲಿ 31 ಸೂಕ್ಷ, 61 ಅತಿ ಸೂಕ್ಷ್ಮ, ಮೂಡುಬಿದರೆಯಲ್ಲಿ 2 ಸೂಕ್ಷ್ಮ, 2 ಅತಿ ಸೂಕ್ಷ್ಮ, ಉಳ್ಳಾಲದಲ್ಲಿ 3 ಸೂಕ್ಷ್ಮ, 8 ಅತಿ ಸೂಕ್ಷ್ಮ, ಬಂಟ್ವಾಳದಲ್ಲಿ 12 ಸೂಕ್ಷ್ಮ, 11 ಅತಿ ಸೂಕ್ಷ್ಮ, ಪುತ್ತೂರಲ್ಲಿ 10 ಸೂಕ್ಷ್ಮ, 2 ಅತಿ ಸೂಕ್ಷ್ಮ, ಬೆಳ್ತಂಗಡಿಯಲ್ಲಿ 3 ಸೂಕ್ಷ್ಮ, 2 ಅತಿ ಸೂಕ್ಷ್ಮ, ಸುಳ್ಯದಲ್ಲಿ 9 ಸೂಕ್ಷ್ಮ, 3 ಅತಿ ಸೂಕ್ಷ್ಮ ಮತಗಟ್ಟೆಗಳಿವೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.  
ಚುನಾವಣೆ ಪ್ರಕ್ರಿಯೆಗೆ 84 ಬಸ್, 22 ಜೀಪು, 27 ಮ್ಯಾಕ್ಸಿ ಕ್ಯಾಬ್‌ಗಳನ್ನು ಬಳಸಲಾಗುತ್ತಿದೆ.
ಜಿಲ್ಲೆಯಲ್ಲಿ 544 ಮತಗಟ್ಟೆಗಳಿವೆ. 380 ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯದ್ದು.
ಮೂಡುಬಿದರೆ 23, ಉಳ್ಳಾಲ 39, ಬಂಟ್ವಾಳ 31, ಪುತ್ತೂರು 42, ಬೆಳ್ತಂಗಡಿಯಲ್ಲಿ 11, ಸುಳ್ಯ ಪಟ್ಟಣ ಪಂಚಾಯ್ತಿಯಲ್ಲಿ 18 ಮತಗಟ್ಟೆ ಸ್ಥಾಪಿಸಲಾಗಿದೆ.
ಜಿಲ್ಲೆಯಲ್ಲಿ 4,63,791 ಮತದಾರರಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ 3,26,995.
ಮತದಾರರ ಭಾವಚಿತ್ರ ಇರುವ ಗುರುತಿನ ಚೀಟಿ ಅಥವಾ ರಾಜ್ಯ ಚುನಾವಣೆ ಆಯೋಗ ನಿಗದಿಪಡಿಸಿದ 21 ದಾಖಲೆ ಪೈಕಿ ಯಾವುದಾದರೂ ದಾಖಲೆಯೊಂದಿಗೆ ಮತ ಚಲಾಯಿಸುವಂತೆ  ಜಿಲ್ಲಾಧಿಕಾರಿ ವಿನಂತಿಸಿದರು.
ಮಹಾನಗರ ಪಾಲಿಕೆಯ 60 ವಾರ್ಡ್‌ಗಳಿಗೆ ಮತಯಂತ್ರಗಳನ್ನು ತರಲಾಗಿದೆ. ಮತಗಟ್ಟೆಗಳ ಸುತ್ತಲು ಭದ್ರತೆ ಒದಗಿಸಲಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಪೊಲೀಸ್ ಕಾನ್‌ಸ್ಟೇಬಲ್ ಸಹಿತ ಭದ್ರತೆ ನೀಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಡಾ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ದಯಾನಂದ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.