ದಕ್ಷಿಣ ಕನ್ನಡ

ಯುವತಿ ಮತಾಂತರ ಯತ್ನ ಪ್ರಕರಣ: ಆರೋಪಿಗಳು ನ್ಯಾಯಾಂಗ ಕಸ್ಟಡಿಗೆ

Published On :

ಪುತ್ತೂರು: ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕದ ಯುವತಿಯನ್ನು ಮತಾಂತರಗೊಳಿಸಲು ಯತ್ನಿಸಿದ ಪ್ರಕರಣದ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದ ಮೂವರು ಆರೋಪಿಗಳನ್ನು ಮತ್ತೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ. ತನಿಖೆ ವೇಳೆ ಪ್ರಕರಣಕ್ಕೆ ಪೂರಕ ಮಾಹಿತಿಗಳು ಲಭ್ಯವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪುತ್ತೂರು ತಾಲೂಕಿನ ಸಾಲ್ಮರ ನಿವಾಸಿ ನೋಟರಿ ವಕೀಲ ಸಾಲ್ಮರ ನೂರುದ್ದೀನ್, ಬೆಟ್ಟಂಪಾಡಿ ನಿವಾಸಿ ಅಲ್ತಾಫ್ ಮತ್ತು ಪ್ರಮುಖ ಆರೋಪಿ ಅಂಕತ್ತಡ್ಕದ ಅಬ್ದುಲ್ ಅಜೀದ್ ಎಂಬವರನ್ನು ಪೊಲೀಸರು ಮಂಗಳವಾರ ಸಂಜೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು. ಆರೋಪಿಗಳನ್ನು ನ್ಯಾಯಾಲಯದ ಆದೇಶದಂತೆ 2 ದಿನ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದ ಪೊಲೀಸರು, ವಿಚಾರಣೆಗೊಳಪಡಿಸಿ ಗುರುವಾರ ಸಂಜೆ ಪುತ್ತೂರು ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ ಆರೋಪಿಗಳನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.