ದಕ್ಷಿಣ ಕನ್ನಡ

ಮಹಿಳೆಯ ವಂಚಿಸಿ ಹಕ್ಕು ಕಸಿಯಲಾಗುತ್ತಿದೆ: ಶಾಹಿದಾ

Published On :

ಮಂಗಳೂರು: ಮಹಿಳೆಯರನ್ನು ಪ್ರತಿಯೊಂದು ಕ್ಷೇತ್ರದಲ್ಲಿ ಅವಕಾಶ ವಂಚಿತರನ್ನಾಗಿ ಮಾಡಿ ಅವರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಫ್ರಂಟ್ ಅಧ್ಯಕ್ಷೆ ಶಾಹಿದಾ ತಸ್ನೀಮ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಮಹಿಳಾ ಫ್ರಂಟ್ ರಾಜ್ಯ ಘಟಕ ವತಿಯಿಂದ ಶುಕ್ರವಾರ ನಡೆದ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದರು.
ಪ್ರಸಕ್ತ ರಾಜಕೀಯದಲ್ಲಿ ಮಹಿಳೆಯರಿಗೆ ಮೀಸಲು ಕಲ್ಪಿಸಿದರೂ ಅದು ದುರ್ಬಳಕೆಯಾಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಡುವ ಛಲವಿದೆ ಎಂಬುವುದನ್ನು ಸಮಾಜಕ್ಕೆ ತೋರಿಸಿಕೊಡುವ ಅಗತ್ಯವಿದೆ. ರಾಜ್ಯ ಸರ್ಕಾರ ಅಶ್ಲೀಲ ಚಿತ್ರಗಳನ್ನು, ಅಮಲು ಪದಾರ್ಥಗಳನ್ನು ನಿಷೇಧಿಸಲಿ ಎಂದರು.
ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಮಮ್ತಾಝ್ ಪಕ್ಕಲಡ್ಕ ಮಾತನಾಡಿ, ಕಳೆದ ವರ್ಷ ದಾಖಲಾದ 12 ಸಾವಿರ ಮಹಿಳಾ ದೌರ್ಜನ್ಯ ಪ್ರಕರಣದ ಪೈಕಿ 4 ಸಾವಿರ ಪ್ರಕರಣ ಲೈಂಗಿಕ ದೌರ್ಜನ್ಯವಾಗಿದೆ. ಆಧುನಿಕ ಸಮಾಜದಲ್ಲಿ ವಿದ್ಯಾವಂತರಿರುವಾಗ ದೌರ್ಜನ್ಯಗಳು ಹೆಚ್ಚುತ್ತಿರುವುದು ವಿಷಾದನೀಯ. ಇಂಥ ಸಂದರ್ಭ ಮಹಿಳೆಯರು ಮೌನ ಮುರಿದು ಒಗ್ಗಟ್ಟಾಗಿ ಹೋರಾಡುವ ಅಗತ್ಯವಿದೆ ಎಂದರು.
ಕೌನ್ಸಿಲ್ ಆಫ್ ಕೆಥೋಲಿಕ್ ಮಹಿಳಾ ಅಧ್ಯಕ್ಷೆ ಲಿಡಿಯಾ ಡಿಕುನ್ಹಾ ಮಾತನಾಡಿ, ಯಾವುದೇ ಪ್ರಕರಣದಲ್ಲಿಯೂ ಮಹಿಳೆಯರಿಗೆ ನ್ಯಾಯ ಸಿಗದಾಗಿದೆ. ಹಾಗಾಗಿ ಪ್ರತಿ ತಾಲೂಕಿನಲ್ಲಿ ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು ಎಂದರು.
ಸಾಮಾಜಿಕ ಕಾರ್ಯಕರ್ತೆ ತಬುಸ್ಸಂ, ಕರಾಟೆ ಚಾಂಪಿಯನ್ ಸುರಯ್ಯ ಮತ್ತು ಲುಬೈನ, ರ್ಯಾಂಕ್ ವಿಜೇತೆ ನಿಹಾಳ ಅಂಜುಮ್ ಇವರನ್ನು ಸನ್ಮಾನಿಸಲಾಯಿತು.
ಕವಯತ್ರಿ ಜ್ಯೋತಿ ಗುರುಪ್ರಸಾದ್, ಕೃಷ್ಣಾಪುರ ಅಲ್‌ಬದ್ರಿಯಾ ಕಾಲೇಜಿನ ಪ್ರಾಂಶುಪಾಲೆ ಝೊಹರಾ ಅಬ್ಬಾಸ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.