ದಕ್ಷಿಣ ಕನ್ನಡ

ಗ್ಯಾಸ್ ಏಜನ್ಸಿಗಳ ವಿರುದ್ಧ ಕೋರ್ಟಿನಲ್ಲಿ ದಾವೆ

Published On :

ಮಂಗಳೂರು: ಗ್ಯಾಸ್ ಏಜನ್ಸಿಗಳ ದುವರ್ತನೆಗಳ ಕುರಿತು ಸಾರ್ವಜನಿಕರಿಂದ ಹೆಚ್ಚು ದೂರುಗಳು ಗ್ಯಾಸ್ ಮತ್ತು ಪಡಿತರ ಬಳಕೆದಾರರ ವೇದಿಕೆಗೆ ಬರುತ್ತಿದ್ದು, ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯದಲ್ಲಿ ದಾವೆ ಹೂಡಲಾಗುವುದು ಎಂದು ವೇದಿಕೆ ಅಧ್ಯಕ್ಷ ಧರ್ಮೇಂದ್ರ ಹೇಳಿದ್ದಾರೆ.ವೇದಿಕೆಯು ತಿಂಗಳ ಹಿಂದೆ ನಡೆಸಿದ್ದ ಜನಸಭೆಯಲ್ಲಿ ಜನರ ಸಮಸ್ಯೆಗಳನ್ನು ಅಡುಗೆ ಅನಿಲ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ, ಏಜನ್ಸಿಗಳಿಗೆ ತಿಳಿಸಲಾಗಿತ್ತು. ಆದರೆ ಇವುಗಳನ್ನು ಕ್ಷುಲ್ಲಕವಾಗಿ ಕಂಡಿರುವ ಏಜನ್ಸಿಗಳು ಮತ್ತೆ ಗ್ರಾಹಕರಿಗೆ ತೊಂದರೆಯುಂಟು ಮಾಡುತ್ತಿದ್ದಾರೆ. ನ್ಯಾಯಾಲಯದಲ್ಲಿ ದಾವೆ ಸಲ್ಲಿಸುವ ಮನವಿಯನ್ನು  ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಶರಣುಬಸಪ್ಪ ಅವರಿಗೆ ವೇದಿಕೆಯ ನಿಯೋಗ ಸಲ್ಲಿಸಿದೆ. ಈ ಸಂದರ್ಭ ವೇದಿಕೆಯ ಉಪಾಧ್ಯಕ್ಷರಾದ ರೇಖಾ ಬಾಳಿಗ, ವಿಶ್ವನಾಥ್, ಸಂಘಟನಾ ಕಾರ್ಯದರ್ಶಿಗಳಾದ ಮುಹಮ್ಮದ್ ಮುಹ್ಸಿನ್, ಅಬ್ದುಲ್ ಸಲಾಂ ಇದ್ದರು.

ಇಂದಿನಿಂದ ಉಚಿತ ತಪಾಸಣೆ ಶಿಬಿರ
ಮಂಗಳೂರು: ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಮಾ. 11 ರಿಂದ 23ರ ವರೆಗೆ ಜೀರ್ಣಾಂಗವ್ಯೂಹದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಉಚಿತ ತಪಾಸಣೆ ಶಿಬಿರ ನಡೆಯಲಿದೆ. ಶಿಬಿರವು ಬೆಳಗ್ಗೆ 9 ರಿಂದ ಮಧ್ಯಾಹ್ನ 12ರ ತನಕ ನಡೆಯಲಿದೆ. ಹೆಚ್ಚಿನ ಮಾಹಿತಿಗೆ 0824-2225533 ಸಂಪರ್ಕಿಸಬಹುದು ಎಂದು ವೈದ್ಯಕೀಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.