ಅನ್ಯ ಕಾರ್ಯನಿಮಿತ್ತ ಶಿಕ್ಷಕರಿಗೆ ರಜೆ
ಮಂಗಳೂರು: ವಿಶ್ವವಿದ್ಯಾಲಯದ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ಮಾ. 27 ರಿಂದ 30ರ ತನಕ ನಡೆಯುವ ವಿಶ್ವ ಸಂವಾದದಲ್ಲಿ ಪಾಲ್ಗೊಳ್ಳಲು ಆಸಕ್ತಿಯಿರುವ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಅಧ್ಯಾಪಕರಿಗೆ ಅನ್ಯ ಕಾರ್ಯ ನಿಮಿತ್ತ ರಜೆ ಮಂಜೂರು ಮಾಡಲಾಗಿದೆ. 'ಭಕ್ತಿ' ಪರಿಕಲ್ಪನೆಯ ಕುರಿತು ಮರು ಚಿಂತನೆ ಎಂಬ ನಾಲ್ಕು ದಿನಗಳ ವಿಚಾರ ಸಂಕಿರಣ ನಡೆಯಲಿದೆ ಎಂದು ಕನಕದಾಸ ಸಂಶೋಧನಾ ಕೇಂದ್ರದ ಸಂಯೋಜಕ ಬಿ. ಶಿವರಾಮ ಶೆಟ್ಟಿ ಹೇಳಿದ್ದಾರೆ. ಹೆಚ್ಚಿನ ಮಾಹಿತಿಗೆ 0824-2284360 ಸಂಪರ್ಕಿಸಬಹುದು.
ಸಾಹಿತ್ಯ ಪರೀಕ್ಷೆಗಳ ಫಲಿತಾಂಶ ಪ್ರಕಟ
ಮಂಗಳೂರು: ಕಳೆದ ಡಿ.28ರಿಂದ 30ರ ವರೆಗೆ ನಡೆದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದ್ದು, ಮಂಗಳೂರು ಕೊಡಿಯಾಲಬೈಲ್ ಎಂಜಿ ರಸ್ತೆಯಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ನೋಡಬಹುದು ಎಂದು ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
30,31ರಂದು ಪೆರ್ಲದಲ್ಲಿ 'ಜನಜನನಿ'
ಕಾಸರಗೋಡು: ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆ ಪರಿಸರದಲ್ಲಿ 30,31ರಂದು ನಡೆಯಲಿರುವ ವಿಶಿಷ್ಟ 'ಜನಜನನಿ' ಕಾರ್ಯಕ್ರಮಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ಗೋಚಂದನ, ಬೆರಣಿ ಅಭಿಯಾನ, ಗೋಕಥಾ ಕಿರಣ ಇತ್ಯಾದಿ ವಿವಿಧ ಕಾರ್ಯಕ್ರಮಗಳ ಮೂಲಕ ಕಾಸರಗೋಡು ತಳಿಯ ದೇಸೀ ಹಸುಗಳ ಮಹತ್ವ ಈ ಸಂದರ್ಭದಲ್ಲಿ ಪ್ರತಿಬಿಂಬಿಸಲಾಗುವುದು. ಕಾರ್ಯಕ್ರಮ ಆಯೋಜಿಸುತ್ತಿರುವ ಬಜಕೂಡ್ಲು ಅಮೃತಧಾರಾ ಗೋಶಾಲೆಗೆ ಪ್ರತಿಷ್ಠಿತ 'ಬ್ರೀಡ್ ಸೇವಿಯರ್ ಅವಾರ್ಡ್' ದೊರೆತಿರುವುದು ಜನಜನನಿ ಕಾರ್ಯಕ್ರಮದ ಮೌಲ್ಯವನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ಜನಜನನೀ ಸಮಿತಿ ಪ್ರಕಟಣೆ ತಿಳಿಸಿದೆ.
ಇಂದಿನಿಂದ ಪಿಯು ಪರೀಕ್ಷೆ: ನಿಷೇಧಾಜ್ಞೆ
ಮಂಗಳೂರು: ಮಾ.13ರಿಂದ 28ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಜಿಲ್ಲೆಯಲ್ಲಿ 49 ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸೆ.144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ನಗರದಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಇದು ಅನ್ವಯವಾಗಲಿದೆ ಎಂದು ನಗರ ಪೊಲೀಸ್ ಕಮಿಷನರ್ ಮನೀಷ್ ಕರ್ಭೀಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

