ಇಲಿ ಪಾಷಾಣ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಮಂಗಳೂರು: ಕಲಿಕೆಯಲ್ಲಿ ಹಿಂದುಳಿದಿದ್ದ ಹೈಸ್ಕೂಲ್ ವಿದ್ಯಾರ್ಥಿನಿ ಪಾವೂರು ಮಲಾರ್ ನಿವಾಸಿ ಮುಮ್ತಾಜ್ (17) ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಭಾನುವಾರ ಮನೆಯವರೆಲ್ಲರೂ ಉರೂಸ್ ಗೆ ಹೋಗಿದ್ದ ವೇಳೆ ಮಧ್ಯಾಹ್ನ ಇಲಿ ಪಾಷಾಣ ಸೇವಿಸಿದ್ದಳು. ತಾಯಿ ಬಂದು ನೋಡಿದಾಗ ಮಗಳ ಬಾಯಲ್ಲಿ ನೊರೆ ಬರುತ್ತಿತ್ತು. ತಕ್ಷಣ ಯೇನೆಪೋಯ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಳು.
ಕಲಿಕೆಯಲ್ಲಿ ಹಿಂದುಳಿದಿದ್ದ ಮುಮ್ತಾಜ್ ಸತತ ಅನುತ್ತೀರ್ಣರಾಗುತ್ತಿದ್ದು, 9ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದಳು. ಇದೀಗ ಪರೀಕ್ಷೆ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ತಂದೆ ಅಬ್ಬಾಸ್ ನೀಡಿದ ದೂರಿನಂತೆ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
---
ಧರ್ಮಸ್ಥಳ: 16ರಂದು ಸ್ವರ್ಣ ಕಲಶ ಸಮರ್ಪಣೆ
ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಬ್ರಹ್ಮಕಲಶವು ಬುಧವಾರದಿಂದ ಪ್ರಾರಂಭವಾಗಿದ್ದು 18 ರ ತನಕ ನಡೆಯಲಿದೆ.
ಈ ಸಂದರ್ಭ 16ರಂದು ಅಮ್ಮನವರ ಗುಡಿಗೆ ಸ್ವರ್ಣ ಕಲಶಗಳ ಸಮರ್ಪಣಾ ಸಮಾರಂಭ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಸಮ್ಮುಖದಲ್ಲಿ ನಡೆಯಲಿದೆ. ಸಂಜೆ 6.30ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ನಿರ್ಮಾಣ ಕಾರ್ಯದಲ್ಲಿ ಭಾಗವಹಿಸಿದ ಶಿಲ್ಪಿಗಳು, ಮರದ ಕುಶಲಕರ್ಮಿಗಳನ್ನು ಸಮ್ಮಾನಿಸಿ ಅಧ್ಯಕ್ಷತೆ ವಹಿಸಲಿದ್ದಾರೆ.
ರವೀಶ ತಂತ್ರಿ ಕುಂಟಾರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸಂಜೆ 5 ಗಂಟೆಗೆ ನೆಲ್ಯಾಡಿ ಬೀಡಿನಿಂದ ಅಮೃತವರ್ಷಿಣಿ ಸಭಾಭವನಕ್ಕೆ ಸ್ವರ್ಣ ಲೇಪಿತ ಕಲಶಗಳನ್ನು ಮೆರವಣಿಗೆಯಲ್ಲಿ ತರಲಾಗುವುದು. ಸ್ವರ್ಣ ಲೇಪಿತ ಮೇಲ್ಪಾವಣಿಯ ಸಮರ್ಪಣೆ 18 ರಂದು ಪೂರ್ವಾಹ್ನ 9 ಗಂಟೆಗೆ ನಡೆಯಲಿದೆ ಎಂದು ಡಿ.ಹರ್ಷೇಂದ್ರ ಕುಮಾರ್ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

