ಕಡಲಿಗೆ ಹಾರಿದ ಮಹಿಳೆ ರಕ್ಷಣೆ
ಮಂಗಳೂರು: ಸೋಮೇಶ್ವರ ಬೀಚ್ ಬಳಿ ಕಡಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಉಳ್ಳಾಲ ಚೆಂಬುಗುಡ್ಡೆಯ ವಿವಾಹಿತ ಮಹಿಳೆಯನ್ನು ಜೀವರಕ್ಷಕ ದಳದವರು ರಕ್ಷಿಸಿದ್ದಾರೆ. ಬುಧವಾರ ಮದ್ಯಾಹ್ನ 3 ಗಂಟೆಗೆ ಸೋಮೇಶ್ವರ ಕಲ್ಲುಗಳ ರಾಶಿಯಿಂದ 40ರ ಹರೆಯದ ಮಹಿಳೆ ಕಡಲಿಗೆ ಹಾರಿದ್ದು, ಇದನ್ನು ನೋಡಿದ ಪಣಂಬೂರು ತೀರ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜೀವಕ್ಷಕ ದಳದವರು ಮಹಿಳೆಯನ್ನು ಕಡಲಿಂದ ಎಳೆದು ತೀರಕ್ಕೆ ತಂದರು. ಮಹಿಳೆಯನ್ನು ಸುರಕ್ಷಾ ವಾಹನದಲ್ಲಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟ್ರಸ್ಟ್ ಸಿಇಒ ಯತೀಶ್ ಬೈಕಂಪಾಡಿ ತಿಳಿಸಿದ್ದಾರೆ. ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಸಂಸಾರ ಕಲಹವೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

