ಯಕ್ಷಗಾನ ತರಬೇತಿ ಶಿಬಿರ
ಹಂಗಾರಕಟ್ಟೆ: ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ- ಐರೋಡಿ 42 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇ ಆದ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ.
ಯಕ್ಷಗಾನ ಭಾಗವತಿಕೆ ತರಗತಿ, ಶಿಕ್ಷಣದೊಂದಿಗೆ ಯಕ್ಷಗಾನ ಎಂಬ ವಸತಿ ಶಾಲಾ ಯೋಜನೆ, ಶಾಲೆಗಳಲ್ಲಿ ಅಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ಶಿಕ್ಷಣ ಹೀಗೆ ಹಲವಾರು ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಅಂತೆಯೇ ಈ ವರ್ಷ ಏ.15 ರಿಂದ 27 ರ ತನಕ ನಮ್ಮ ಕಲಾಕೇಂದ್ರದಲ್ಲಿ ಶಾಲಾ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಯಕ್ಷಗಾನ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದೇವೆ. 5ನೇ ತರಗತಿಯಿಂದ 10ನೇ ತರಗತಿಯೊಳಗಿನ ಮಕ್ಕಳಿಗೆ ಶಿಬಿರದಲ್ಲಿ ಯಕ್ಷಗಾನ ಕುಣಿತ, ಮಾತುಗಾರಿಕೆಯನ್ನು ಕಲಿಸಲಾಗುವುದು. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ ಗಂಟೆ 1ರ ತನಕ ಶಿಬಿರ ನಡೆಯುತ್ತದೆ. ಆಸಕ್ತರು ಮನೆಯವರ ಅನುಮತಿಯೊಂದಿಗೆ ಕಲಾಕೇಂದ್ರ ಅಥವಾ 9880605610ನ್ನು ಸಂಪರ್ಕಿಸಿ ಹೆಸರು ನೋಂದಾಯಿಸಬೇಕು.
ನಾಳೆ 'ಕುರಿಯ ಶಾಸ್ತ್ರಿ ಜನ್ಮಶತಮಾನೋತ್ಸವ'
ಮಂಗಳೂರು: ಕುರಿಯ ವಿಠಲಶಾಸ್ತ್ರಿ ಜನ್ಮಶತಮಾನೋತ್ಸವ ಪ್ರಯುಕ್ತ ಮಾ. 16 ರಂದು ಪುರಭವನದಲ್ಲಿ 'ತೆಂಕುತಿಟ್ಟಿನ ಯಕ್ಷಗಾನ ಹಿಮ್ಮೇಳ, ಮುಮ್ಮೇಳ ಅನುಸಂಧಾನ' ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10.15ಕ್ಕೆ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎಲ್. ಸಾಮಗ ಉದ್ಘಾಟಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅಧ್ಯಕ್ಷತೆ ವಹಿಸುವರು. ಯಕ್ಷಗಾನ ಸಂಶೋಧಕ ಡಾ.ಕೆ.ಎಂ. ರಾಘವ ನಂಬಿಯಾರ್ ಪಾಲ್ಗೊಳ್ಳುವರು. ತೆಂಕುತಿಟ್ಟು ಯಕ್ಷಗಾನ ಹಿಮ್ಮೇಳ ನಾಟ್ಯ ಪ್ರಾತ್ಯಕ್ಷಿಕೆ ನಡೆಯಲಿದೆ. ಈ ಸಂದರ್ಭ ಹಿರಿಯ ಯಕ್ಷಗಾನ ಭಾಗವತ ಬಲಿಪ ನಾರಾಯಣ ಅವರಿಗೆ 'ಕುರಿಯ ಪ್ರಶಸ್ತಿ' ಪ್ರದಾನ ಮಾಡಲಾಗುವುದು. ಮಧ್ಯಾಹ್ನ 2ಗಂಟೆಗೆ ಸಹಸ್ರಬಾಹು, 'ಬಾಹುಕ-ಋತುಪರ್ಣ', 'ಪಾಂಡವರ ಒಡ್ಡೋಲಗ' ಪ್ರಸಂಗ ನಡೆಯಲಿದೆ. 'ಭಕ್ತ ಮಯೂರ ಧ್ವಜ' ತಾಳಮದ್ದಳೆ, 'ಜಾಂಬವತಿ ಕಲ್ಯಾಣ' ಯಕ್ಷಗಾನ ಬಯಲಾಟ ನಡೆಯಲಿದೆ.
ಜೀವಶಾಸ್ತ್ರ ಪರೀಕ್ಷೆಗೆ 50 ವಿದ್ಯಾರ್ಥಿಗಳ ಗೈರು
ಮಂಗಳೂರು: ಜಿಲ್ಲೆಯಲ್ಲಿ ಗುರುವಾರ ಪದವಿಪೂರ್ವ ಪರೀಕ್ಷೆಯು 49 ಕೇಂದ್ರದಲ್ಲಿ ನಡೆಯಿತು. ಜೀವಶಾಸ್ತ್ರ ಪರೀಕ್ಷೆಗೆ ಒಟ್ಟು 6713 ವಿದ್ಯಾರ್ಥಿಗಳು ನೋಂದಾಯಿಸಿದ್ದು, 6663 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 50 ವಿದ್ಯಾರ್ಥಿಗಳು ಗೈರಾಗಿದ್ದರು. ಎಲೆಕ್ಟ್ರಾನಿಕ್ಸ್ ಪರೀಕ್ಷೆಯಲ್ಲಿ ಒಟ್ಟು 935 ವಿದ್ಯಾರ್ಥಿಗಳಲ್ಲಿ 8 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಒಟ್ಟು 927 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಎಲ್ಲ ಕೇಂದ್ರದಲ್ಲಿ ಪರೀಕ್ಷೆ ಸಾಂಗವಾಗಿ ನಡೆದಿದ್ದು, ಯಾವುದೇ ಡಿಬಾರ್ ಪ್ರಕರಣ ನಡೆದಿಲ್ಲ. ಬುಧವಾರ ಒಬ್ಬ ವಿದ್ಯಾರ್ಥಿ ಮಾತ್ರ ಡಿಬಾರ್ ಆಗಿದ್ದು ಎಂದು ಪಿಯು ಬೋರ್ಡ್ ಅಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

