ದಕ್ಷಿಣ ಕನ್ನಡ

ಕಾವೂರು ವಿಜಯೋತ್ಸವ ಗಲಭೆ: ಇಲಾಖಾ ತನಿಖೆಗೆ ಕಮಿಷನರ್ ಆದೇಶ

Published On :

ಮಂಗಳೂರು: ಕಾವೂರು ಕುಂಜತ್ತಬೈಲ್ ಕಾಂಗ್ರೆಸ್ ಕಾರ್ಪೊರೇಟರ್ ವಿಜಯೋತ್ಸವ ಗಲಭೆಗೆ ಸಂಬಂಧಿಸಿ ಪೊಲೀಸರ ಪಾತ್ರದ ಬಗ್ಗೆ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಮನೀಶ್ ಕರ್ಬಿಕರ್ ತಿಳಿಸಿದ್ದಾರೆ. ಈ ಬಗ್ಗೆ ಎಸಿಪಿ ಸುಭಾಶ್ಚಂದ್ರ ತನಿಖೆ ನಡೆಸಲಿದ್ದು, ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಕುಂಜತ್ತಬೈಲ್ ಅಯ್ಯಪ್ಪ ಮಂದಿರ ಕಟ್ಟೆ ಬಳಿ ವಿಜಯೋತ್ಸವ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿತ್ತು. ಬಳಿಕ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಪೊಲೀಸರ ಮೇಲೆ ಹಲ್ಲೆ ಮತ್ತು ಪೊಲೀಸರು ಬಿಜೆಪಿ ಮಾಜಿ ಕಾರ್ಪೊರೇಟರ್ ಶರತ್ ಮತ್ತು ಹಿಂದು ಸಂಘಟನೆ ಕಾರ್ಯಕರ್ತ ಪ್ರಮೋದ್ ಮೇಲೆ ಪೊಲೀಸರು ಹಲ್ಲೆ ನಡೆಸಿದ ಆರೋಪ ಇದೆ. ಇದೇ ಕಾರಣಕ್ಕೆ ಬಿಜೆಪಿ ಮತ್ತು ಸಂಘಪರಿವಾರ ಕಾರ್ಯಕರ್ತರು ಕಾವೂರು ಠಾಣೆ ಎಸ್‌ಐ ಮತ್ತು ಸಿಬ್ಬಂದಿಯನ್ನು ಅಮಾನತು ಗೊಳಿಸುವಂತೆ ಆಗ್ರಹಿಸಿ, ಪ್ರತಿಭಟನೆ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.