ದಕ್ಷಿಣ ಕನ್ನಡ

ಪರವಾನಗಿ ನವೀಕರಣ: ಲೋಕಾಯುಕ್ತ ಬಲೆಗೆ 'ನುಂಗಣ್ಣ'

Published On :

ಮಣಿಪಾಲ: ನದಿ ಮರಳು ಗಣಿಗಾರಿಕೆ ಪರವಾನಗಿ ನವೀಕರಣಕ್ಕೆ ಲಂಚ ಸ್ವೀಕರಿಸುತ್ತಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖಾಧಿಕಾರಿ ಮಂಗಳವಾರ ಉಡುಪಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಆರೋಪಿ ಗಿರೀಶ್ ಮೋಹನ್, ಅವರು ಹೆರ್ಗ ಸಂದೀಪ್ ಕೋಟ್ಯಾನ್  ಎಂಬವರ ಮರಳುಗಾರಿಕೆಯ ತ್ರೈಮಾಸಿಕ ಪರವಾನಗಿ ನವೀಕರಣಕ್ಕೆ ಲಂಚ ಕೇಳಿದ್ದರು.
ಈ ಬಗ್ಗೆ ಕೋಟ್ಯಾನ್  ಅವರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು.
ಲೋಕಾಯುಕ್ತ ಪೊಲೀಸರ ಸೂಚನೆಯಂತೆ ಕೋಟ್ಯಾನ್ ಅವರು ಮಂಗಳವಾರ ಮಧ್ಯಾಹ್ನ 2.30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿಯಲ್ಲಿ ರು. 4,500 ಗಳನ್ನು ಗಿರೀಶ್ ಮೋಹನ್ ಅವರಿಗೆ ನೀಡುತ್ತಿದ್ದಾಗ, ಲೋಕಾಯುಕ್ತ ಡಿವೈಎಸ್ಪಿ ವಿಠಲದಾಸ ಪೈ, ಇನ್ಸ್ಪೆಕ್ಟರ್ ದಿನೇಶ್ ಬಿ.ಪಿ. ಮತ್ತು ಸಿಬ್ಬಂದಿ ದಾಳಿ ನಡೆಸಿ ಆಧಾರ ಸಹಿತವಾಗಿ ಆರೋಪಿಯನ್ನು ಬಂಧಿಸಿದ್ದಾರೆ.
ಜಿಲ್ಲೆಯಲ್ಲಿ ಮರಳುಗಾರಿಕೆ, ಕಲ್ಲು ಗಣಿಗಾರಿಕೆ ಇತ್ಯಾದಿ ನೂರಾರು ಪರವಾನಗಿಗಳಿವೆ. ಈ ಪರವಾನಗಿ ಪ್ರತಿ 3 ತಿಂಗಳಿಗೊಮ್ಮೆ ನವೀಕರಣಗೊಳ್ಳಬೇಕು.
ಅಧಿಕಾರಿ ಗಿರೀಶ್ ಮೋಹನ್ ಪ್ರತಿಯೊಬ್ಬರಿಂದಲೂ ಲಂಚ ಸ್ವೀಕರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.