ಮತದಾನ ಹೆಚ್ಚಿಸಲು ಆಂದೋಲನಕ್ಕೆ ಸಿದ್ಧತೆ
ಮಂಗಳೂರು: ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಳಕ್ಕೆ ಚುನಾವಣೆ ಆಯೋಗ ನಿರ್ದೇಶನದಂತೆ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು 'ಮತದಾರ ಶಿಕ್ಷಣ, ಜಾಗೃತಿ ಮತ್ತು ಸಮರ್ಪಕ ಪಾಲ್ಗೊಳ್ಳುವಿಕೆ' ಬಹುಮಾಧ್ಯಮ ಪ್ರಚಾರ ಆಂದೋಲನ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
'ನಿಮ್ಮ ಮತ, ನಿಮ್ಮ ಹಕ್ಕು, ಸುಭದ್ರ ಪ್ರಜಾಪ್ರಭುತ್ವಕ್ಕೆ ಸರ್ವರ ಪಾಲ್ಗೊಳ್ಳುವಿಕೆ' ಧ್ಯೇಯದೊಂದಿಗೆ 18 ವರ್ಷ ತುಂಬಿದವರು ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಕುರಿತು ಮಾಹಿತಿ ನೀಡುವ ಬಗ್ಗೆ ಕಾರ್ಯಕ್ರಮ ರೂಪಿಸಲು ಜಿಲ್ಲಾಧಿಕಾರಿ ಎನ್. ಪ್ರಕಾಶ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಮತದಾರ ಹೆಸರು ನೋಂದಾವಣೆಗೆ ಜಾಗೃತಿ, 2ನೇ ಹಂತದಲ್ಲಿ ಮತದಾನದಿಂದ ಆಗುವ ಪ್ರಯೋಜನಗಳ ಮಾಹಿತಿ, 3ನೇ ಹಂತದಲ್ಲಿ ನಿರ್ಭೀತ ಮತದಾನಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಜನರಿಗೆ ತಲುಪಿಸಬೇಕು ಎಂದರು.
'ಸ್ಥಳೀಯ ಸಂಸ್ಥೆ ಮತ್ತು ಮಹಾನಗರ ಪಾಲಿಕೆಯಲ್ಲಿ ಫಾರ್ಮ್ 6 ಪಡೆಯಲು ಪ್ರತ್ಯೇಕ ಕೌಂಟರ್ ಆರಂಭ ಹಾಗೂ ಮಾಹಿತಿ ಫಲಕ, ಜಾಥ ಆಯೋಜಿಸುತ್ತೇವೆ' ಎಂದು ಪಾಲಿಕೆ ಆಯುಕ್ತ ಡಾ.ಹರೀಶ್ ಕುಮಾರ್ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಮಾತನಾಡಿ, ಬೂತ್ ಮಟ್ಟದ ಅಧಿಕಾರಿ, ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು, ತಹಸೀಲ್ದಾರರು, ಕಂದಾಯ ಅಧಿಕಾರಿ, ಮಹಾನಗರ ಪಾಲಿಕೆ, ಸಹಾಯಕ ಕಮಿಷನರ್ ಪ್ರೇರಣಾತ್ಮಕ ಕಾರ್ಯಕ್ರಮ ಆಯೋಜಿಸಲಾಗುವುದು. ನಿರ್ಲಕ್ಷ್ಯ ವಹಿಸಿದರೆ ಅಮಾನತು ಮಾಡಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿ.ಪಂ. ಸಿಇಒ, ಪಾಲಿಕೆ ಆಯುಕ್ತ, ಜಿಲ್ಲಾ ವಾರ್ತಾಧಿಕಾರಿ, ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ಮಂಗಳೂರು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ, ಶಿಕ್ಷಣ ಇಲಾಖೆ ಉಪನಿರ್ದೇಶಕರು ಸಹಿತ ಸ್ಥಳಿಯಾಡಳಿತ ಅಧಿಕಾರಿಗಳು ಸಮಿತಿಯಲ್ಲಿದ್ದಾರೆ.
ನೋಟಿಸ್: ಸಭೆಗೆ ಗೈರಾದವರಿಗೆ ಚುನಾವಣೆ ಜರೂರು ಕರ್ತ್ಯವ್ಯದಡಿ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

