ದಕ್ಷಿಣ ಕನ್ನಡ

ಜೀವ ವೈವಿಧ್ಯ ಸಂರಕ್ಷಣೆ ಇಂದಿನ ಅಗತ್ಯ:ಮಧ್ಯಸ್ಥ

Published On :

ಮಣಿಪಾಲ: ಪರಿಸರ ಸಮತೋಲನಕ್ಕೆ ಮಾತ್ರವಲ್ಲ, ಹಲವು ರೋಗಗಳಿಂದ ರಕ್ಷಣೆ ಪಡೆಯಲು ತಮ್ಮದೇ ಆದ ಕೊಡುಗೆ ನೀಡುತ್ತಿರುವ ಜೀವ ವೈವಿಧ್ಯಗಳನ್ನು ರಕ್ಷಿಸುವುದು ಅತ್ಯಂತ ಅಗತ್ಯ ಎಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಡಾ. ಎನ್. ಎ. ಮಧ್ಯಸ್ಥ ಅಭಿಪ್ರಾಯಪಟ್ಟಿದ್ದಾರೆ.
ಅವರು ಮಂಗಳವಾರ ಇಲ್ಲಿನ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಅಧಿಕಾರಿಗಳಿಗೆ ಜೀವ ವೈವಿಧ್ಯ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಸರದಲ್ಲಿರುವ ಬಹಳಷ್ಟು ಜೀವ ವೈವಿಧ್ಯಗಳನ್ನು ಇನ್ನೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಆದರೂ ಪ್ರಸ್ತುತ ಪತ್ತೆ ಹಚ್ಚಲಾಗಿರುವ ಜೀವ ವೈವಿಧ್ಯಗಳನ್ನು ಕಾಪಾಡಲು ಗ್ರಾಪಂ ಅಧಿಕಾರಿಗಳಿಗೆ, ಶಿಕ್ಷಕರಿಗೆ, ತಾಲ್ಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಕ್ತ ತರಬೇತಿಯನ್ನು ನೀಡಬೇಕು, ಭವಿಷ್ಯದ ದೃಷ್ಟಿಯಿಂದ ಜೀವ ವೈವಿಧ್ಯತೆ ಉಳಿದರೆ ಮಾನವನ ಮುಂದಿನ ಪೀಳಿಗೆ, ಪರಿಸರ ಉಳಿಯುತ್ತದೆ ಇದನ್ನು ಉಳಿಸುವ ಅಥವ ನಾಶ ಮಾಡುವುದು ನಮ್ಮ ನಿಮ್ಮ ಕೈಯಲ್ಲಿಯೇ ಇದೆ ಎಂದು ಅವರು ತಿಳಿಸಿದರು.
ಈ ಸಂದರ್ಭ ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಸ್. ಸುಗಾರ್, ಜೀವ ವೈವಿಧ್ಯವನ್ನು ನಾಶ ಮಾಡಲು ಪ್ರಯತ್ನಿಸುವವರಿಗೆ ರು. 5 ಲಕ್ಷ ದಂಡ ಅಥವಾ 10 ವರ್ಷಗಳ ಕಾರಾಗೃಹ ವಾಸ ಅಥವಾ ಎರಡನ್ನೂ ವಿಧಿಸಬಹುದಾಗಿದ್ದು, ವಿಶಿಷ್ಟ ಜೀವ ವೈವಿಧ್ಯದ ನಾಶದ ಕುರಿತು ಮಾಹಿತಿ ನೀಡುವವರಿಗೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಡುಪಿ ಜಿಪಂ ಮು.ಕಾ.ನಿ. ಅಧಿಕಾರಿ ಎಸ್.ಎ. ಪ್ರಭಾಕರ ಶರ್ಮಾ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನಿಸರ್ಗಾಪೇಕ್ಷ ಸೂಸೈಟಿಯ ಕಾರ್ಯದರ್ಶಿ ನೀರಜ್ ನಿರ್ಮಲ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.