ದಕ್ಷಿಣ ಕನ್ನಡ

ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ

Published On :

ಉಡುಪಿ: ಕುತ್ಯಾರು ಕೇಂಜ ಬಸ್ ನಿಲ್ದಾಣದಿಂದ ಗರೋಡಿಗೆ ಹೋಗುವ ರಸ್ತೆ ಡಾಂಬರೀಕರಣಕ್ಕೆ ಶಾಸಕರ ನಿಧಿಯಿಂದ ಬಿಡುಗಡೆಗೊಂಡ ರು. 10 ಲಕ್ಷ ವೆಚ್ಚದ ಕಾಮಗಾರಿಗೆ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಇತ್ತೀಚೆಗೆ ಚಾಲನೆ ನೀಡಿದರು. ವೇದಮೂರ್ತಿ ಕೇಂಜ ಶ್ರೀಧರ ತಂತ್ರಿ, ಉಡುಪಿ ತಾ.ಪಂ. ಅಧ್ಯಕ್ಷೆ ಗೌರಿ ಪೂಜಾರಿ, ಜಿ.ಪಂ. ಸದಸ್ಯ ಪಾದೂರು ಅರುಣ್ ಶೆಟ್ಟಿ, ತಾ.ಪಂ. ಸದಸ್ಯೆ ಲಿಲ್ಲಿ ಡಿ' ಸೋಜ, ಕುತ್ಯಾರು ಗ್ರಾ.ಪಂ. ಅಧ್ಯಕ್ಷೆ ರೂಪಾ ಆಚಾರ್ಯ, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಗ್ರಾ.ಪಂ. ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ, ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಗದೀಶ ಅರಸ್, ಕಾರ್ಯದರ್ಶಿ ಕುತ್ಯಾರು ಪ್ರಸಾದ್ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಧೀರಜ್ ಶೆಟ್ಟಿ, ಸಂಪತ್ ಕೇಂಜ, ಇಂದಿರಾ ಮೂಲ್ಯ, ಪಂಚಾಯಿತಿ ಕಾರ್ಯದರ್ಶಿ ಸಂದೀಪ್ ಇದ್ದರು.

ಮ್ಯಾರಥಾನ್ ವಿಜೇತರಿಗೆ ಅಭಿನಂದನೆ
ಪೆರ್ಡೂರು:
ಇತ್ತೀಚೆಗೆ ಮಣಿಪಾಲದಲ್ಲಿ ನಡೆದ ಹಾಫ್ ಮ್ಯಾರಥಾನ್ ಓಟದಲ್ಲಿ ವಿಜೇತರಾದ ಪೆರ್ಡೂರು ಪ್ರೌಢಶಾಲೆಯ 8 ಮಂದಿ ಕ್ರೀಡಾಳುಗಳನ್ನು ಪ್ರೌಢಶಾಲೆಯಲ್ಲಿ ವಿಶೇಷ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು.
ಮುಖ್ಯ ಅತಿಥಿಗಳಾಗಿ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ.ಎಚ್.ಎಸ್. ಬಲ್ಲಾಳ್ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಡಳಿತ ಸಮಿತಿ ಅಧ್ಯಕ್ಷ ಎಂ.ಆರ್. ಹೆಗ್ಡೆ ವಹಿಸಿದ್ದರು. ಶಾಲೆಯ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ರಮೇಶ ನಾಯಕ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಪಕ್ ಹೆಗ್ಡೆ ಇದ್ದರು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಎಚ್.ಎಸ್. ಗಣೇಶ ಭಟ್ ಸ್ವಾಗತಿಸಿದರು. ಶಿಕ್ಷಕ ಜಿ.ಪಿ. ಪ್ರಭಾಕರ ನಿರೂಪಿಸಿ, ಶಿಕ್ಷಕಿ ಸರೋಜಾ ವಂದಿಸಿದರು. ಮ್ಯಾರಥಾನ್ ಓಟದಲ್ಲಿ ವಿವಿಧ ಬಹುಮಾನ ವಿಜೇತ ಕಿರಣ, ಜ್ಯೋತಿ, ಪ್ರದೀಪ, ಕವಿತಾ, ಸುಧೀರ, ರಾಘವೇಂದ್ರ, ರಶ್ಮಿತಾ, ಪವಿತ್ರ ಇವರನ್ನು ಇಂದಿರಾ ಎಚ್.ಎಸ್. ಬಲ್ಲಾಳ ಮತ್ತು ಸರೋಜಾ ಎಂ. ಹೆಗ್ಡೆ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಈ ಕ್ರೀಡಾಪಟುಗಳಿಗೆ ತರಬೇತಿ ನೀಡಿದ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ ಕುಮಾರ ಶೆಟ್ಟಿ ಮತ್ತು ರಾಮಾಯಣ ಹಾಗೂ ಮಹಾಭಾರತ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.