ಸುದ್ದಿ ಸಂಕ್ಷೇಪ
ಉಚ್ಚಿಲ: ವಿವಿಧ ಕಾಮಗಾರಿ ಉದ್ಘಾಟನೆ
ಪಡುಬಿದ್ರಿ: ಇಲ್ಲಿನ ಉಚ್ಚಿಲ ಬಡಾ ಗ್ರಾಪಂನ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕಾಪು ಶಾಸಕ ಲಾಲಾಜಿ ಮೆಂಡನ್ ಇತ್ತೀಚೆಗೆ ಉದ್ಘಾಟಿಸಿದರು. ಈ ಸಂದರ್ಭ ಲಾಲಾಜಿ ಮೆಂಡನ್ ಮಾತನಾಡಿ, ಉಚ್ಚಿಲ ಬಡಾ ಗ್ರಾಪಂ ಸುವರ್ಣ ಗ್ರಾಮ ಯೋಜನೆಯಲ್ಲಿ ಅತಿ ಹೆಚ್ಚಿನ ಸುಮಾರು 1.64 ಕೋಟಿ ಅನುದಾನ ಪಡೆದಿದೆ. ಈ ಅನುದಾನದಲ್ಲಿ ದೇಜಾಡಿ ರಸ್ತೆ, ಭಾಸ್ಕರ ನಗರ ರಸ್ತೆ ಹಾಗೂ ಉಚ್ಚಿಲ- ಮುದರಂಗಡಿ ರಸ್ತೆ ಕಾಂಕ್ರಿಟೀಕರಣಗೊಳಿಸಲಾಗಿದೆ ಎಂದರು.
ಈ ಸಂದರ್ಭ ಗ್ರಾಪಂ ಅಧ್ಯಕ್ಷ ವಸಂತ ಶೆಟ್ಟಿ, ಉಪಾಧ್ಯಕ್ಷೆ ನಾಗರತ್ನ ಅಶೋಕ್, ಜಿಪಂ ಸದಸ್ಯ ಅರುಣ್ ಶೆಟ್ಟಿ ಪಾದೂರು, ತಾಪಂ ಸದಸ್ಯೆ ಕೇಸರಿ ಯುವರಾಜ್, ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಇಂದು ವಿದ್ಯುತ್ ಇಲ್ಲ
ಮಂಗಳೂರು: ಮಣಿಪಾಲ 110/33/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ವಿದ್ಯುತ್ ಪರಿವರ್ತಕ ಸಂಖ್ಯೆ 4ರಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.21ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2 ಗಂಟೆವರೆಗೆ ಶಿರ್ವ 33 ಕೆವಿ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಯುವಕ ನಾಪತ್ತೆ
ಉಡುಪಿ: ಇಲ್ಲಿಗೆ ಸಮೀಪದ ಪಾಂಬೂರು ಗ್ರಾಮದ ಬುದ್ಧಿಮಾಂದ್ಯ ಯುವಕನೊಬ್ಬ ನಾಪತ್ತೆಯಾದ ಘಟನೆ ಭಾನುವಾರ ಸಂಭವಿಸಿದೆ. ಸದಾಶಿವ ಅವರ ತಮ್ಮ ಶಿವಕುಮಾರ (22) ನಾಪತ್ತೆಯಾದ ವ್ಯಕ್ತಿ. ಇವರು ಭಾನುವಾರ ಮನೆಯಿಂದ ಹೊರಗೆ ಹೋದವರು ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾರೆ ಎಂಬುದಾಗಿ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಯುಷ್ ಆರೋಗ್ಯ ಶಿಬಿರ
ಹೆಬ್ರಿ: ಉಡುಪಿ ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯುಷ್ ಆರೋಗ್ಯ ಉಚಿತ ಶಿಬಿರ ಇತ್ತೀಚೆಗೆ ನಡೆಯಿತು. ಶಿಬಿರವನ್ನು ಜಿ.ಪಂ ಸದಸ್ಯೆ ಮಮತಾ ಅಧಿಕಾರಿ ಉದ್ಘಾಟಿಸಿದರು. ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಂದ್ರಿಕಾ ಕಿಣಿ ಮಾಹಿತಿ ನೀಡಿದರು. ಮರ್ಣೆ ಗ್ರಾ.ಪಂ ಅಧ್ಯಕ್ಷೆ ಹೀರಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಡಾ. ಹರಿಪ್ರಕಾಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಅಲಕಾನಂದ ರಾವ್, ಡಾ.ನೀತಾ, ಸಂಧ್ಯಾ ಕುಮಾರಿ ಮುಂತಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

