ದಕ್ಷಿಣ ಕನ್ನಡ

ಕೆಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮಾತಿನ ಚಕಮಕಿ

Published On :

ಸುಳ್ಯ: ಕರ್ನಾಟಕ ಜನತಾ ಪಕ್ಷದ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಸಭೆಯು ಇತ್ತೀಚೆಗೆ ಇಲ್ಲಿನ ಸುರಭಿ ಹೊಟೇಲ್‌ನಲ್ಲಿ ನಡೆದಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾರನ್ನು ಅಭ್ಯರ್ಥಿಯನ್ನಾಗಿಸಬೇಕೆಂಬ ವಿಚಾರವಾಗಿ ಬಿಸಿ ಬಿಸಿ ಚರ್ಚೆ ನಡೆಯಿತು.
 ವಿಧಾನಸಭಾ ಚುನಾವಣೆಗೆ ಸುಳ್ಯ ಕ್ಷೇತ್ರದಿಂದ ಕುಂಞರಾಮನ್‌ರನ್ನು ಅಭ್ಯರ್ಥಿಯಾಗಿಸದೆ ಕುಶಲ ಅವರನ್ನು ಅಭ್ಯರ್ಥಿಯಾಗಿಸಲು ಕ್ಷೇತ್ರಾಧ್ಯಕ್ಷರು ಆಸಕ್ತರಾಗಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಬಾಲಕೃಷ್ಣ ಗೌಡರಿಗೂ ಕುಂಞರಾಮನ್‌ರಿಗೂ ಮಾತುಗಳ ವಿನಿಮಯವಾಯಿತು.
 ಅಲ್ಲದೆ, ಸುಳ್ಯ ತಾಲೂಕು ಅಧ್ಯಕ್ಷರನ್ನಾಗಿ ಶಿವಶಂಕರ್ ಅವರನ್ನು ನೇಮಿಸಬೇಕೆಂಬ ಪ್ರಸ್ತಾಪ ಬಂತೆಂದೂ, ವಿಧಾನಸಭಾ ಅಭ್ಯರ್ಥಿಯಾಗಿ ಕುಂಞರಾಮನ್‌ರಿಗೆ ಪ್ರಥಮ ಆದ್ಯತೆ ನೀಡಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತು.
 ಸಭೆಯಲ್ಲಿ ಜಿಲ್ಲಾ ಕೆಜೆಪಿ ಅಧ್ಯಕ್ಷ ರವೀಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಅಬೂಬಕರ್ ಕೈರಂಗಳ ಮತ್ತು ಗುರುಚಂದ್ರ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷ ಗೋಕುಲದಾಸ್ ಭಂಡಾರ್ಕರ್, ಜಿಲ್ಲಾ ಸಮಿತಿಯ ರಾಮಕೃಷ್ಣ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ನೆಲ್ಯಾಡಿ, ಜಿಲ್ಲಾ ಉಪಾಧ್ಯಕ್ಷ ಕುಂಞರಾಮನ್, ಜಿಲ್ಲಾ ಕಾರ್ಯದರ್ಶಿ ಶಿವಶಂಕರ್ ಪಾಲಡ್ಕ, ಕ್ಷೇತ್ರ ಕಾರ್ಯದರ್ಶಿ ಫಾರೂಕ್ ಬೆಳ್ಳಾರೆ, ಮಾಜಿ ಶಾಸಕ ಕೆ. ಕುಶಲ, ಕಳೆದ ನಗರ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ ನಾಲ್ವರು ಅಭ್ಯರ್ಥಿಗಳು ಮತ್ತು ಇತರ ಕಾರ್ಯಕರ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.