ದಕ್ಷಿಣ ಕನ್ನಡ

ಮದ್ಯ ಅಕ್ರಮ ಮಾರಾಟ: ಇಬ್ಬರ ಸೆರೆ

Published On :

ಪುತ್ತೂರು: ಸಂಪ್ಯ ಠಾಣಾ ವ್ಯಾಪ್ತಿಯ ಪ್ರತ್ಯೇಕ ಎರಡು ಕಡೆಗಳಲ್ಲಿ ಶುಕ್ರವಾರ ಪತ್ತೆಯಾದ ಅಕ್ರಮ ಮದ್ಯ ಮಾರಾಟ ಪ್ರಕರಣಗಳಿಗೆ ಸಂಬಂಧಿಸಿ ಸಂಪ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ನಿಡ್ಪಳ್ಳಿ ಎಂಬಲ್ಲಿ ರಸ್ತೆ ಬದಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ನಿಡ್ಪಳ್ಳಿ ಗ್ರಾಮದ ತಂಬುತ್ತಡ್ಕ ನಿವಾಸಿ ಐತ್ತಪ್ಪ ನಾಯ್ಕ ಎಂಬವರನ್ನು ಪೊಲೀಸರು ಬಂಧಿಸಿ ಆತನ ಬಳಿಯಿದ್ದ 48 ಬಾಟಲಿ ವಿಸ್ಕಿ ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಇರ್ದೆ ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದ ಬಾಳೆಪ್ಪಾಡಿ ನಿವಾಸಿ ಮಹಾಬಲ ರೈ ಎಂಬಾತನನ್ನು ಬಂಧಿಸಿರುವ ಪೊಲೀಸರು 48 ಬಾಟಲಿ ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ.
ಸಂಪ್ಯ ಠಾಣಾ ಎಸ್.ಐ ಜಗದೀಶ್ ರೆಡ್ಡಿ ನೇತೃತ್ವದ ಪೊಲೀಸರು  ಈ ಎರಡು ಪ್ರಕರಣ ಪತ್ತೆ ಮಾಡಿದ್ದಾರೆ. ಆರೋಪಿಗಳಿಬ್ಬರನ್ನು  ಪೊಲೀಸರು ಶುಕ್ರವಾರ ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.