ದಕ್ಷಿಣ ಕನ್ನಡ

ಮೆನ್ನಬೆಟ್ಟು ಗ್ರಾ.ಪಂ. ಸದಸ್ಯೆ ಗೀತಾ ಸಾಲ್ಯಾನ್ ರಾಜಿನಾಮೆ

Published On :

ಮೂಲ್ಕಿ: ಮೆನ್ನಬೆಟ್ಟು ಗ್ರಾಮ ಪಂಚಾಯಿತಿನ ನಡುಗೋಡು ಗ್ರಾಮದ ಮಹಿಳಾ ಮೀಸಲಾತಿ ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಗೀತಾ ಸಾಲ್ಯಾನ್ ಅವರು ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿದ್ದು, ಈ ಬಗ್ಗೆ ಮೆನ್ನಬೆಟ್ಟು ಪಂಚಾಯಿತಿ ಅಧ್ಯಕ್ಷೆ, ಪಕ್ಷದ ಕ್ಷೇತ್ರಾಧ್ಯಕ್ಷೆ, ಸಂಸದ, ರಾಜ್ಯ ಅಧ್ಯಕ್ಷ ಹಾಗೂ ಮುಖ್ಯಮಂತ್ರಿಗೆ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ತನ್ನ ವ್ಯಾಪ್ತಿಯ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಲ್ಲಿ ಪಕ್ಷದ ಕೆಲವು ಸದಸ್ಯರು ಅಡಚಣೆ ಮಾಡುತ್ತಿದ್ದು, ಕ್ಷೇತ್ರದ ಜನರಿಗೆ ಮೂಲ ಸೌಕರ್ಯ ಒದಗಿಸಲು ಅಸಾಧ್ಯವಾಗಿದೆ. ತನ್ನ ಗಮನಕ್ಕೆ ಬಾರದೇ ಪಕ್ಷದ ಸದಸ್ಯರು 2 ಮನೆಯವರ ಅನುಕೂಲಕ್ಕಾಗಿ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಅನಧಿಕೃತವಾಗಿ ಮರಗಳನ್ನು ಕಡಿದು ರಸ್ತೆ ನಿರ್ಮಿಸಿದ್ದಾರೆ. ಇದನ್ನು ಪಂಚಾಯಿತಿ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದಿರುವುದರಿಂದ ಬೇಸತ್ತು ರಾಜಿನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.