ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ಮಲ್ಪೆ: ಸೈಂಟ್ ಮೇರಿಸ್ ದ್ವೀಪಕ್ಕೆ ವಿಹಾರಕ್ಕೆ ಹೋಗಿದ್ದ ಮಣಿಪಾಲ ವಿವಿಯ ವಿದ್ಯಾರ್ಥಿಯೊಬ್ಬ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಮೃತ ವಿದ್ಯಾರ್ಥಿ ಕಿಟ್ಟು ಜಯರಾಜ (25).
ಈತ ಮೂಲತಃ ಕೇರಳದ ಕೊಟ್ಟಾಯಂ ಜಿಲ್ಲೆಯ ಕೊಟ್ಟುಂಗಲ್ ಎಂಬಲ್ಲಿನ ನಿವಾಸಿ, ಕೆ.ಎ. ಜಯರಾಜ್ ಎಂಬವರ ಮಗ. ಕಿಟ್ಟು ಮತ್ತು ಇತರ 30 ಮಂದಿ ವಿದ್ಯಾರ್ಥಿಗಳು ಭಾನುವಾರ ಕಾಲೇಜಿಗೆ ರಜೆ ಇದ್ದು, ವಿಹಾರಕ್ಕೆಂದು ಮಲ್ಪೆಯಿಂದ ಟ್ರಾವೆಲ್ ಬೋಟ್ನಲ್ಲಿ ಸೈಂಟ್ ಮೇರಿಸ್ ದ್ವೀಪಕ್ಕೆ ಹೋಗಿದ್ದರು.
ಅಲ್ಲಿ ಎಲ್ಲಾ ಗೆಳೆಯರು ನೀರಿನಲ್ಲಿ ಆಟವಾಡುತ್ತಿದ್ದಾಗ ಬೆಳಗ್ಗೆ 10.30 ಗಂಟೆಗೆ ಕಿಟ್ಟು ನೀರಿನ ಅಲೆಗಳ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋದ. ಅಲ್ಲದೇ ನೀರಿನಲ್ಲಿ ಮುಳುಗೆಳುತ್ತಾ ತನ್ನನ್ನು ಬದುಕಿಸುವಂತೆ ಗೆಳೆಯರಿಗೆ ಕೂಗುತ್ತಿದ್ದ. ತಕ್ಷಣ ಅಲ್ಲಿದ್ದ ಇತರರು ಸಾಹಸಪಟ್ಟು ಆತನನ್ನು ನೀರಿನಿಂದ ಮೇಲಕ್ಕೆತ್ತಿ ಬೋಟಿನಲ್ಲಿ ಮಲ್ಪೆಗೆ ತಂದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಸಾಗಿಸಿದಾಗ, ಪರೀಕ್ಷಿಸಿದ ವೈದ್ಯರು ಕಿಟ್ಟು ಜಯರಾಜ ಆಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಆತನ ಸಹಪಾಠಿ ಸಿದ್ದಾರ್ಥ ಎಂಬವರು ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

