ಇಂದಿನಿಂದ ವೈದ್ಯನಾಥ, ಅರಸು ದೈವಗಳ ಪುನರ್ಪ್ರತಿಷ್ಠೆ, ಬ್ರಹ್ಮಕಲಶೋತ್ಸವ
ಬಂಟ್ವಾಳ: ನಗರದ ಮಧ್ಯಭಾಗದ ನಂದನಹಿತ್ತಿಲುವಿನಲ್ಲಿರುವ ಶ್ರೀ ವೈದ್ಯನಾಥ, ಅರಸು, ಜುಮಾದಿಬಂಟ ದೈವಗಳ ದೈವಸ್ಥಾನವು ನೂತನ ಶಿಲಾಮಯವಾಗಿ ನವೀಕರಣಗೊಂಡಿದ್ದು ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಸಮಾರಂಭ ಮಾ.27ರಿಂದ 31ರವರೆಗೆ ಅದ್ಧೂರಿಯಾಗಿ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪ್ರಕಾಶ್ ಅಂಚನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ವೈದ್ಯನಾಥ, ಅರಸು ದೈವದ ಶಿಲಾಮಯ ಗರ್ಭಗುಡಿ, ಪೌಳಿ, ನಾಗನಗುಡಿ, ಗೋಪುರ ಸೇರಿದಂತೆ ವಿವಿಧ ಅಭಿವದ್ಧಿ ಕಾರ್ಯಗಳು ಸುಮಾರು ಒಂದು ಕೋಟಿ ರುಪಾಯಿಗೂ ಅಧಿಕ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡಿವೆ. ಪೊಳಲಿ ಗಿರಿಪ್ರಕಾಶ್ ತಂತ್ರಿ ಮತ್ತು ಎಡಪದವು ವೆಂಕಟೇಶ್ ತಂತ್ರಿಗಳ ಪೌರೋಹಿತ್ಯದಲ್ಲಿ ಪುನರ್ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ವಿವಿಧ ವೈಧಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಏ.1 ರಿಂದ 3ರವರೆಗೆ ವಾರ್ಷಿಕ ನೇಮೋತ್ಸವ ನಡೆಯಲಿದೆ ಎಂದು ತಿಳಿಸಿದರು.
ಮಾ.27ರಂದು ಸಂಜೆ 4 ಗಂಟೆಗೆ ಬಿ.ಸಿ. ರೋಡಿನ ಕೈಕಂಬ ಪೊಳಲಿ ದ್ವಾರದಿಂದ ದೈವಸ್ಥಾನದವರೆಗೆ ವೈಭವ ಪೂರ್ಣವಾದ ಹೊರೆಕಾಣಿಕೆಯ ಮೆರವಣಿಗೆ ನಡೆಯಲಿದೆ. 28 ರಂದು ಬೆಳಿಗ್ಗೆ ನಾಗಪ್ರತಿಷ್ಠೆ, ಸಂಜೆ ದುರ್ಗಾ ನಮಸ್ಕಾರ ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನಾ ಕಾರ್ಯಕ್ರಮ ನಡೆಯಲಿದೆ. 29 ಮತ್ತು 30 ರಂದು ವಿವಿಧ ವೈಧಿಕ ವಿಧಿವಿಧಾನಗಳು, 31 ರಂದು ಬೆಳಿಗ್ಗೆ ದೈವಗಳಿಗೆ ಬ್ರಹ್ಮಕಲಶೋತ್ಸವವು ನೆರವೇರಲಿದೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

