ಮತಪಟ್ಟಿ ನೋಂದಣಿಗೆ ಜಾಗೃತಿ ಮೂಡಿಸಿ
ಮಂಗಳೂರು: ಅರ್ಹ ಮತದಾರರನ್ನು ಮತದಾನಕ್ಕೆ ಪ್ರೇರೇಪಿಸಿ ಪ್ರಜಾಪ್ರಭುತ್ವವನ್ನು ಭದ್ರಪಡಿಸಲು ಈಗಾಗಲೇ ಎಲ್ಲ ಜಿಲ್ಲೆಗಳಲ್ಲಿ ಸ್ವೀಪ್ ಕಾರ್ಯಕ್ರಮ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಜಾರಿಗೊಳಿಸಲಾಗಿದ್ದು, ಇದರ ಬಗ್ಗೆ ಜನತೆಯಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಆಯೋಗದ ಖರ್ಚು ವೆಚ್ಚದ ವಿಶೇಷ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಹೇಳಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್,ನಲ್ಲಿ ಜಾಗೃತಿ ಯೋಜನೆಯ ಬಗ್ಗೆ ವಿವಿಧ ಜಿಲ್ಲಾಧಿಕಾರಿಗಳಿಗೆ ವಿವರಿಸಿದರು. ದ.ಕ.ಜಿಲ್ಲಾಧಿಕಾರಿ ಹರ್ಷಗುಪ್ತ ಅಭಿಪ್ರಾಯಿಸಿ, ಸ್ವೀಪ್,ನ ಕ್ರಿಯಾ ಯೋಜನೆ ಜತೆಗೆ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಜನರೊಂದಿಗೆ ಸಂಪರ್ಕ ಹೊಂದಿರುವ ಬಿಎಲ್,ಒಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು.
ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಸದಾಚಾರ ಸಂಹಿತೆ ಬಗ್ಗೆ ವಿವರಿಸಿದರು. ಅಪರ ಜಿಲ್ಲಾಧಿಕಾರಿ ದಯಾನಂದ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವಿಜಯ ಪ್ರಕಾಶ್ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

