ದಕ್ಷಿಣ ಕನ್ನಡ

ವಿದ್ಯುತ್ ಕಣ್ಣಾಮುಚ್ಚಾಲೆ- ಬಳಕೆದಾರರ ಆಕ್ರೋಶ

Published On :

ಬೆಳ್ತಂಗಡಿ: ತಾಲೂಕಿನಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ನಿರಂತರವಾಗಿದ್ದು, ಬಳಕೆದಾರರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಕಳೆದ ಎರಡು ಮೂರು ತಿಂಗಳಿನಿಂದ ತಾಲೂಕಿನಲ್ಲಿ ವಿದ್ಯುತ್ ಅನಿಯಮಿತವಾಗಿ ಸರಬರಾಜು ಆಗುತ್ತಿದೆ. ಈ ಬಗ್ಗೆ ಮೆಸ್ಕಾಂ ಯಾವುದೇ ಪೂರ್ವ ಸೂಚನೆ ನೀಡದೆ ಗ್ರಾಹಕರನ್ನು ಗೊಂದಲದಲ್ಲಿ ದೂಡಿದೆ. ಕೆಲವೆಡೆ 2 ತಾಸು ಇದ್ದು ಮತ್ತೆ 2 ತಾಸು ಕಣ್ಮರೆಯಾಗುತ್ತಿದೆ. ಒಂದೊಂದು ಬಾರಿ 15 ನಿಮಿಷಕ್ಕೊಮ್ಮೆ ವಿದ್ಯುತ್ ನೀಡುವುದು, ನೀಡದಿರುವುದು ನಡೆಯುತ್ತದೆ.
ಬೆಳ್ತಂಗಡಿ ಪಟ್ಟಣದಲ್ಲಂತೂ ವಿದ್ಯುತ್ ನೀಡುವುದಕ್ಕೆ ಮತ್ತು ತೆಗೆಯುವುದಕ್ಕೆ ಯಾವುದೇ ನಿಯಮ ಇಲ್ಲ. ಮನಸ್ಸಿಗೆ ಬಂದಂತೆ ಮೆಸ್ಕಾಂನವರು ವರ್ತಿಸುತ್ತಿದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ತಾಲೂಕಿನಲ್ಲಿ ದಿನವಹಿ ಸುಮಾರು 25 ರಿಂದ 26 ಮೆಗಾವ್ಯಾಟ್ ಬೇಕಾಗುತ್ತದೆ. ಆದರೆ, ಮಂಗಳೂರು ಕೇಂದ್ರದಿಂದ ಸರಬರಾಜಾಗುವುದು 19 ಮೆಗಾವ್ಯಾಟ್ ಮಾತ್ರ. ಹೀಗಾಗಿ ಉಳಿದ ಆರೇಳು ಮೆಗಾವ್ಯಾಟ್ ವಿದ್ಯುತ್ನ್ನು ಸರಿದೂಗಿಸಲು ಮನಬಂದಂತೆ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎನ್ನುತ್ತಾರೆ ಸ್ಥಳೀಯರು.


ವಿದ್ಯುತ್ ಕಡಿತ ಬೆಳ್ತಂಗಡಿ ತಾಲೂಕಿನಲ್ಲಿ ಮಾತ್ರ ಇದ್ದು, ಬೇರೆ ತಾಲೂಕಿನಲ್ಲಿ ಈ ರೀತಿ ಇಲ್ಲ. ಯಾಕೆ ಈ ರೀತಿ ತಾರತಮ್ಯ ಮಾಡುತ್ತಿದ್ದಾರೆ. ಇಲ್ಲಿನ ಶಾಸಕರೂ ಈ ಸಮಸ್ಯೆಗೆ ಸ್ಪಂದಿಸದಿರುವುದು ಶೋಚನೀಯ. ವಿದ್ಯುತ್ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸದಿದ್ದರೆ ಭಾರತೀಯ ಜನತಾ ಪಕ್ಷ ತೀವ್ರ ಹೋರಾಟಕ್ಕಿಳಿಯಲಿದೆ ಎಂದು ಬಿಜೆಪಿ ಜಿಲ್ಲಾ ಪ್ರಭಾರಿ ಪ್ರತಾಪಸಿಂಹ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.