ದಕ್ಷಿಣ ಕನ್ನಡ

ಶಿಕ್ಷಕ ಕೊಲೆ ಪ್ರಕರಣ: ಆರೋಪಿಗಳ ಖುಲಾಸೆ

Published On :

ಪುತ್ತೂರು: ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ 2 ವರ್ಷಗಳ ಹಿಂದೆ ನಡೆದ ಶಿಕ್ಷಕರೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಎದುರಿಸುತ್ತಿದ್ದ 7 ಮಂದಿಯನ್ನು ಪುತ್ತೂರು ತ್ವರಿತಗತಿ ನ್ಯಾಯಾಲಯ ಶನಿವಾರ ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಶಿಕ್ಷಕ ಪೆರಾಡಿ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಎದುರಿಸುತ್ತಿದ್ದ ವಸಂತ ಪೂಜಾರಿ, ದಿವಾಕರ ಭಂಡಾರಿ, ಸದಾನಂದ ಪೂಜಾರಿ, ಸುರೇಶ್ ಪೂಜಾರಿ, ಆನಂದ ಪೂಜಾರಿ, ಕೋಂಕ್ರ ಪೂಜಾರಿ ಮತ್ತು ಕೃಷ್ಣಪ್ಪ ಪೂಜಾರಿ ಆರೋಪ ಮುಕ್ತಗೊಂಡವರು.
16.12.2010ರಂದು ಶಿಕ್ಷಕ ಪೆರಾಡಿ ಅವರು ಬೆಂಗಳೂರಿನಿಂದ ನಾರಾವಿಗೆ ಬಸ್ಸಿನಲ್ಲಿ ಬಂದು ಇಳಿದು ರಸ್ತೆ ಬದಿ ನಿಂತಿದ್ದ ವೇಳೆ ಆರೋಪಿಗಳು ಸೇರಿಕೊಂಡು ಕತ್ತಿಯಿಂದ ಕಡಿದು ಕೊಲೆಗೈದು, ಬಳಿಕ ಅವರು ಬಂದಿದ್ದ ವಾಹನವನ್ನು ಶವದ ಮೇಲೆ ಹಾಯಿಸಿದ್ದರೆಂಬ ಆರೋಪವಿತ್ತು. ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ ತ್ವರಿತಗತಿ ನ್ಯಾಯಾಲಯ ಆರೋಪಿಗಳನ್ನು ನಿರಪರಾಧಿಗಳೆಂದು ಪರಿಗಣಿಸಿ ದೋಷಮುಕ್ತಿಗೊಳಿಸಿದೆ. ಆರೋಪಿಗಳ ಪರವಾಗಿ ಮಂಗಳೂರಿನ ವಕೀಲರಾದ ವಿಕ್ರಮ್ ಹೆಗ್ಡೆ, ಪ್ರಭಾಕರ ಆಚಾರ್ಯ, ಪುತ್ತೂರಿನ ವಕೀಲರಾದ ನರಸಿಂಹ ಪ್ರಸಾದ್ ಮತ್ತು ಕೃಷ್ಣಪ್ರಸಾದ್ ವಾದಿಸಿದ್ದರು.
ಕಳವು ಯತ್ನ ಆರೋಪಿಗೆ 3 ದಿನ ಪೊಲೀಸ್ ಕಸ್ಟಡಿ
ಪುತ್ತೂರು: ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಮನೆಯೊಂದರಿಂದ ಹೆಂಚು ಕಳ್ಳತನ ನಡೆಸಲು ಯತ್ನಿಸಿದ ಆರೋಪದಲ್ಲಿ ಸಂಪ್ಯ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ಕಾಸರಗೋಡಿನ ದೇಲಂಪಾಡಿ ಗ್ರಾಮದ ಅಡೂರು ನಿವಾಸಿ ಹರೀಶ್ ಎಂಬಾತನನ್ನು ಪುತ್ತೂರು ನ್ಯಾಯಾಲಯ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಯು ತಾನು ಕೆಲಸ ಮಾಡುತ್ತಿದ್ದ ಬೆಟ್ಟಂಪಾಡಿ ಗ್ರಾಮದ ಚಂದ್ರಹಾಸ ರೈ ಎಂಬವರ ಮನೆಯ ವಠಾರದಲ್ಲಿ ಇರಿಸಲಾಗಿದ್ದ ಹೆಂಚನ್ನು ಗುರುವಾರ ರಾತ್ರಿ ಕಳವುಗೈದು ಮಾರಾಟಕ್ಕೆ ಯತ್ನಿಸಿದ್ದ. ಸ್ಥಳೀಯರು ಶುಕ್ರವಾರ ಹಿಡಿದು ಸಂಪ್ಯ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿಯ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಸಂಪ್ಯ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆತನನ್ನು ಶನಿವಾರ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.